ಉಬರಡ್ಕ ಮಿತ್ತೂರು : ಹೆಣ್ಣು ಶಿಶು ಪ್ರದರ್ಶನ ಮತ್ತು ಪೌಷ್ಟಿಕ ಆಹಾರ ಸಪ್ತಾಹ

0

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ತಾ.ಪಂ.ಉಬರಡ್ಕ ಮಿತ್ತೂರು,ನಂದಿನಿ ಮಹಿಳಾ ಮಂಡಲ ಉಬರಡ್ಕ ಮಿತ್ತೂರು,ಪಂಚಮಿ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಉಬರಡ್ಕ ಮಿತ್ತೂರು ಇದರ ಸಹಯೋಗದೊಂದಿಗೆ ಹೆಣ್ಣು ಶಿಶು ಪ್ರದರ್ಶನ,ಗ್ರಾಮ ಮಟ್ಟದ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉಬರಡ್ಕ ಮಿತ್ತೂರು ಗ್ರಾ.ಪಂ.ಸಭಾಭವನದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ ಭಾಗೀರಥಿ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಗುತ್ತಿಗಾರು ವಲಯದ ಮೇಲ್ವಿಚಾರಕಿ ಶ್ರೀಮತಿ ಉಷಾ ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಉಬರಡ್ಕ ಮಿತ್ತೂರು ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಯು.,ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸುರೇಶ ಎಂ.ಹೆಚ್,ನಂದಿನಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ನಳಿನಾಕ್ಷಿ ಬೇರ್ಪಡ್ಕ,ಆರೋಗ್ಯ ಸುರಕ್ಷಾಧಿಕಾರಿ ಶ್ರೀಮತಿ ರೇವತಿ,ಸಮುದಾಯ ಆರೋಗ್ಯ ಅಧಿಕಾರಿ ಕು.ದೀಕ್ಷಿತಾ,ಗ್ರಾ.ಪಂ.ಸಿಬ್ಬಂದಿ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು. ಶ್ರೀಮತಿ ರೇವತಿ ಎಂ.ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.ಜಯಪ್ರಕಾಶ್ ಯು.ಊಟದ ವ್ಯವಸ್ಥೆಗೆ ತರಕಾರಿ ಮತ್ತು ಬಿಸ್ಕೆಟ್ ನೀಡಿದರು. ಶಿಶು ಪ್ರದರ್ಶನದಲ್ಲಿ ಭಾಗವಹಿಸಿದ ಮಕ್ಕಳಿಗೆ ಮತ್ತು ಪೌಷ್ಟಿಕ ಆಹಾರ ತಯಾರಿಸಿ ತಂದ ಎಲ್ಲರಿಗೂ ಹಾಗೂ ಪೌಷ್ಟಿಕ ಆಹಾರ ತಯಾರಿಕೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಶೀಲಾ ಪಿ.ಪ್ರಾರ್ಥಿಸಿದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಮಿತ್ರಾ ಸ್ವಾಗತಿಸಿ, ಶ್ರೀಮತಿ ಸುಶೀಲ ವಂದಿಸಿದರು. ಕು.ಗೀತಾ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಶೋಭಾ ಮತ್ತು ಶ್ರೀಮತಿ ಪ್ರೇಮಲತಾ ಸಹಕರಿಸಿದರು.

LEAVE A REPLY

Please enter your comment!
Please enter your name here