ನಾಳೆ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ದ್ವಾರ ಮತ್ತು ಚಾರಿತ್ರಿಕ ಉಬ್ಬು ಶಿಲ್ಪಗಳ ಲೋಕಾರ್ಪಣೆ

0

 

ಉಬರಡ್ಕದ ಅಮೈಮಡಿಯಾರು ಶಾಲೆಯಲ್ಲಿ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ದ್ವಾರ ಮತ್ತು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ 1837 ರ ಅಮರ ಸೈನ್ಯದ ಚಾರಿತ್ರಿಕ ಉಬ್ಬುಶಿಲ್ಪಗಳ ಲೋಕಾರ್ಪಣೆಯು ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ಹಾಗೂ ಊರವರ ಮತ್ತು ದಾನಿಗಳ ಸಹಕಾರದೊಂದಿಗೆ ನಾಳೆ ನಡೆಯಲಿದೆ.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಮೀನುಗಾರಿಕೆ ಹಾಗೂ ಬಂದರು ಒಳನಾಡು ಜಲ ಸಾರಿಗೆ ಸಚಿವ ಹಾಗೂ ಶಾಸಕ ಎಸ್ ಅಂಗಾರ ವಹಿಸಲಿದ್ದಾರೆ.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ.ಚಿದಾನಂದ ಕೆ.ವಿ ದ್ವಾರದ ಉದ್ಘಾಟನೆ ಮಾಡಲಿದ್ದಾರೆ. ಉಬ್ಬುಶಿಲ್ಪದ ಲೋಕಾರ್ಪಣೆಯನ್ನು ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ ನೆರವೇರಿಸಲಿದ್ದಾರೆ.ಸಭಾ ಕಾರ್ಯಕ್ರಮವು ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ.


ನಂತರ ಅಮೈಮಡಿಯಾರು ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು, ಹಾಗೂ ಅಮರ ಸುಳ್ಯದ ಸ್ವಾತಂತ್ರ್ಯ ಹೋರಾಟ ಬಗ್ಗೆ ಅಮರ ಸಮರ ನಾಯಕ ಕೆದಂಬಾಡಿ ರಾಮಯ್ಯ ಗೌಡ ಎಂಬ ನಾಟಕ ನಡೆಯಲಿದೆ.