ಅ.05 : ಬೆಳ್ಳಾರೆಯಲ್ಲಿ 35 ನೇ ವರ್ಷದ ಶ್ರೀ ಶಾರದೋತ್ಸವ

0

 

ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ವತಿಯಿಂದ 35 ನೇ ವರ್ಷದ ಶ್ರೀ ಶಾರದೋತ್ಸವವು ಅ.05 ರಂದು ಬೆಳ್ಳಾರೆ ಅಚಲಾಪುರ ಕಟ್ಟೆಯ ಬಳಿ ವಿವಿಧ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ 8.30 ಕ್ಕೆ ಶಾರದಾ ಪ್ರತಿಷ್ಠೆ,ಪೂಜೆ ನಡೆಯಲಿದೆ.
ಬೆಳಿಗ್ಗೆ ಗಂಟೆ 9.30 ರಿಂದ 12 ರವರೆಗೆ ವಿದ್ಯಾರಂಭ (ಅಕ್ಷರಾಭ್ಯಾಸ) ಶಾರದಾ ಸಹಸ್ರ ನಾಮಾರ್ಚನೆ, ಅಷ್ಟೋತ್ತರನಾಮಾರ್ಚನೆ, ಆಯುಧ ಪೂಜೆ, ಇತ್ಯಾದಿ ಸೇವೆಗಳು ನಡೆಯಲಿದೆ.
ಗಂಟೆ 10.00 ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 12.00 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.
ಸಂಜೆ ಗಂಟೆ 6.00 ರಿಂದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ.
ದಿನೇಶ್ ಕೋಡಪದವು ಸಂಯೋಜನೆಯ “ಕವಿರತ್ನ ಕಾಳಿದಾಸ” – “ಯಕ್ಷ ಹಾಸ್ಯ” ನಡೆಯಲಿದೆ.
ರಾತ್ರಿ ಗಂಟೆ 8.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆದ ಬಳಿಕ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ನಡೆದು ಜಲಸ್ತಂಭ ನಡೆಯಲಿದೆ ಎಂದು ಶಾರದೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here