ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಶತಮಾನೋತ್ಸವ ಪ್ರಯುಕ್ತ ಹಣ್ಣುಗಳ ಕೃಷಿ ಮಾಹಿತಿ

0

 

 

ಸಂಪನ್ಮೂಲ ವ್ಯಕ್ತಿ ಅನಿಲ್ ಬಳಂಜ ಅವರಿಂದ ಹಣ್ಣುಗಳ ಕೃಷಿ ಮಾಹಿತಿ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಪ್ರಯುಕ್ತ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಜಂಟಿ ಆಶ್ರಯದಲ್ಲಿ ಹಣ್ಣುಗಳ ಕೃಷಿ ಮಾಹಿತಿ ಕಾರ್ಯಕ್ರಮವು ಸೆ.25ರಂದು ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಕಾರ್ತಿಕೇಯ ಸಭಾಭವನದಲ್ಲಿ ಜರುಗಿತು.

 

ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ರೈತ ಉತ್ಪಾದಕ ಸಂಘದ ಅಧ್ಯಕ್ಷ ವೀರಪ್ಪ ಗೌಡ, ಸಹಾಯಕ ತೋಟಗಾರಿಕಾ ಅಧಿಕಾರಿ ಅರಬಣ್ಣ ಪೂಜಾರಿ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಸಂಪನ್ಮೂಲ ವ್ಯಕ್ತಿ ಅನಿಲ್ ಬಳಂಜ ಅವರು ಹಣ್ಣಗಳ ಕೃಷಿಯ ವಿಧಾನದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಸಹಕಾರಿ ಸಂಘದ ನಿರ್ದೇಶಕರುಗಳಾದ ಗಣೇಶ್ ಅಂಬಾಡಿಮೂಲೆ, ಸುಖೇಶ್ ಅಡ್ಕಾರುಪದವು, ಶ್ರೀಮತಿ ಸಾವಿತ್ರಿ ಕಾರಿಂಜ, ಶ್ರೀಮತಿ ಭಾರತಿ ಪಿ.ಕೆ. , ಶ್ರೀಮತಿ ಪ್ರೇಮಲತಾ ಪಲ್ಲತ್ತಡ್ಕ, ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಸಹಕಾರಿ ಸಂಘದ ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸಹಕಾರಿ ಸಂಘದ ಸಿಬ್ಬಂದಿಗಳು, ಕನಕಮಜಲು ಹಾಗೂ ಜಾಲ್ಸೂರು ಗ್ರಾಮದ ಕೃಷಿಕರು ಉಪಸ್ಥಿತರಿದ್ದರು.