ಸೈಂಟ್ ಜೋಸೆಫ್ ಮತ್ತು ಸೈಂಟ್ ಬ್ರಿಜಿಡ್ಸ್ ಶಾಲೆಯ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಕಾರ್ಯಕ್ರಮ

0

 

ಸಾಧನೆ ಮಾಡಿದ 150 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಗೌರವರ್ಪಣೆ

ಗುರುಗಳ ಶಿಕ್ಷಣದೊಂದಿಗೆ ಪೋಷಕರ ಪ್ರೇರಣೆಯಿದ್ದರೆ ಮಾತ್ರ ವಿದ್ಯಾರ್ಥಿಗಳಿಗೆ ಯಶಸ್ವಿನ ಗುರಿಮುಟ್ಟಲು ಸಾಧ್ಯ: ಕೆ ಆರ್ ಗೋಪಾಲಕೃಷ್ಣ

 

ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ಹಾಗೂ ಸೈಂಟ್ ಬ್ರಿಜಿಡ್ಸ್ ವಿದ್ಯಾಸಂಸ್ಥೆಗಳ ಆಡಳಿತ ಸಮಿತಿ,ಶಿಕ್ಷಕವರ್ಗ ಮತ್ತು ಪೋಷಕ ಸಮಿತಿಗಳ ಸಹಯೋಗದೊಂದಿಗೆ ತಾಲೂಕು ಮಟ್ಟ,ಜಿಲ್ಲಾ ಹಾಗೂ ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೆ.24 ರಂದು ಸೈಂಟ್ ಬ್ರಿಜಿಡ್ಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಿವೃತ ಪ್ರಾಂಶುಪಾಲರು ಸಂಗೀತ ತಜ್ಙ ಕೆ ಆರ್ ಗೋಪಾಲಕೃಷ್ಣ ಉದ್ಘಾಟಿಸಿ ಸಾಧಕರನ್ನು ಸನ್ಮಾನಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ “ಅಧ್ಯಾಪಕರು ಶಾಲೆಯ ಪಾಠದೊಂದಿಗೆ ಇತರ ಕಲೆಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಬೇಕು ಅದರಿಂದ ವಿದ್ಯಾರ್ಥಿಗಳು ಹೆಚ್ಚು ಆಕರ್ಷಿತರಾಗುತ್ತಾರೆ.
ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಾಗ ಒಂದು ಒಳ್ಳೆಯ ಗುರಿಯನ್ನು ಇಟ್ಟುಕೊಂಡು ಶಿಕ್ಷಣ ಪಡೆಯಬೇಕು ಗುರಿ ತಲುಪಬೇಕು ಎಂದು ಶತಪ್ರಯತ್ನ ಪಟ್ಟರೆ ಖಂಡಿತ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಇದಕ್ಕೆ ಗುರುಗಳ ಶಿಕ್ಷಣದೊಂದಿಗೆ ಪೋಷಕರ ಪ್ರೇರಣೆ ಅತ್ಯಗತ್ಯ ಎಂದರು.”


ಶಿಕ್ಷಣ ಸಂಸ್ಥೆಗಳ ಸಂಚಾಲ ರೆ.ಪಾ ವಿಕ್ಟರ್ ಡಿಸೋಜ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಸುಳ್ಯ ತಾಲೂಕು ಕ್ರೀಡಾ ಪರಿವೀಕ್ಷಕರು ಸೂಫಿ ಪೆರಾಜೆ ಮಕ್ಕಳ ಸಾಧನೆ ಬಗ್ಗೆ ಮಾತನಾಡಿ ಅಭಿನಂದಿಸಿದರು.
ಸೈಂಟ್ ಬ್ರಿಜಿಡ್ಸ್ ಚರ್ಚ್ ಪಾಲನ ಸಮಿತಿ ಉಪಾಧ್ಯಕ್ಷ ಗಾಡ್ಪ್ರಿ ಮೊಂತೆರೊ,ಸೈಂಟ್ ಬ್ರಿಜಿಡ್ಸ್ ಶಾಲೆ ಪೋಷಕ ಸಮಿತಿ ಅಧ್ಯಕ್ಷೆ ಮೀನಾಕ್ಷಿ,ಸೈಂಟ್ ಜೋಸೆಫ್ ಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ಬಿನೋಮ,ಸೈಂಟ್ ಬ್ರಿಜಿಡ್ಸ್ ಶಾಲೆ ಮುಖ್ಯ ಶಿಕ್ಷಕಿ ಅಂತೋನಿ‌ ಮೇರಿ ಮೊದಲಾದವರು ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕ ರಕ್ಷಕ ಸಮಿತಿ ಅಧ್ಯಕ್ಷ ಹರೀಶ್ ರಾವ್ ಕಣಪಿಲ ಸ್ವಾಗತಿಸಿದರು. ಶಿಕ್ಷಕಿ ಚೇತನ ವಂದಿಸಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಸಿರಿ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸೈಂಟ್ ಜೋಸೆಫ್ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಕೊರಗಪ್ಪ ರವರನ್ನು ,ಸುಳ್ಯ ಜೇಸಿಐ ಸಿಟಿ ವತಿಯಿಂದ ಮೌನ ಸಾಧಕ ಪ್ರಶಸ್ತಿ ಪುರಸ್ಕೃತ ಶರೀಫ್ ಸುದ್ದಿ ಜಟ್ಟಿಪಳ್ಳ, ಜ್ಞಾನ ಮಂದಾರ ಟ್ರಸ್ಟ್ ಕೊಡಮಾಡುವ ಸಮಾಜರತ್ನ ಪ್ರಶಸ್ತಿ ಪುರಸ್ಕೃತ ನವೀನ್ ಮಚಾದೊ ಜಯನಗರ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.
ವಿವಿಧ ರೀತಿಯಲ್ಲಿ ಸಾಧನೆಗೈದ ಸೈಂಟ್ ಜೋಸೆಫ್ ಹಾಗೂ ಸೈಂಟ್ ಬ್ರಿಜಿಡ್ಸ್ ಶಾಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಿದರು.
ಶಿಕ್ಷಕ ಬಾನುಪ್ರಕಾಶ್, ಶಿವಾನಂದ,ಸಿಸ್ಟರ್ ಅಂತೊನಿ ಮೇರಿ ಅಭಿನಂದನ ಪತ್ರ ವಾಚಿಸಿದರು.
ಶಿಕ್ಷಕಿ ಹೇಮಲತಾ ಕಾರ್ಯಕ್ರಮ ನಿರೂಪಿಸಿ ಸೈಂಟ್ ಬ್ರಿಜಿಡ್ಸ್ ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ಹಾಗೂ ಸೈಂಟ್ ಜೋಸೆಫ್ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವೇಣಿ ಸಹಕರಿಸಿದರು.