ಜಾಲ್ಸೂರು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಗ್ರಾ.ಪಂ.‌ ವ್ಯಾಪ್ತಿಯಲ್ಲಿ ಸ್ವಚ್ಛತೆ

0
46

 

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛಭಾರತ್ ಮಿಷನ್, ಜಾಲ್ಸೂರು ಗ್ರಾ.ಪಂ. ಗ್ರಾಮ ಪಂಚಾಯತಿ ಮಟ್ಟದ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ವತಿಯಿಂದ ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛತೆಯೇ ಸೇವೆ ಸ್ವಚ್ಛತಾ ಕಾರ್ಯಕ್ರಮವು ಸೆ.25ರಂದು ನಡೆಯಿತು.

ಕಾರ್ಯಕ್ರಮವನ್ನು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ ಅವರು ಉದ್ಘಾಟಿಸಿದರು. ಬಳಿಕ ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕದಿಕಡ್ಕದಿಂದ ಬೊಳುಬೈಲಿನ ತನಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ವಿಜಯ ಕಾಳಮನೆ, ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಗ್ರಾ.ಪಂ. ಸದಸ್ಯರುಗಳಾದ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಸುಬ್ರಹ್ಮಣ್ಯ ಸಂಜೀವಿನಿ ಸಂಘದ ಅಧ್ಯಕ್ಷೆ ಶ್ರೀಮತಿ ವೇದಾ ಹರೀಶ್ ಶೆಟ್ಟಿ ನೆಕ್ರಾಜೆ, ಎಂ.ಬಿ.ಕೆ. ಶ್ರೀಮತಿ ಸೌಮ್ಯ ಕದಿಕಡ್ಕ, ಸಂಜೀವಿನಿ ಸಂಘದ ಎಲ್.ಸಿ.ಆರ್.ಪಿ. ಗಳಾದ ಶ್ರೀಮತಿ ಸವಿತ ಪೆರುಮುಂಡ, ಕು. ಚಂದ್ರಕಲಾ ಅಡ್ಕಾರು, ಗ್ರಾ.ಪಂ. ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟ ಪದಾಧಿಕಾರಿಗಳು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here