ಬೆಳ್ಳಾರೆ: ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ

0

 

ಬೆಳ್ಳಾರೆಯ ಸ್ನೇಹಶ್ರೀ ಮಹಿಳಾ ಮಂಡಲದ ವತಿಯಿಂದ ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ ಸೆ. 23ರಂದು ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಚಾವಡಿಬಾಗಿಲು ಶಾಮ್ ಭಟ್ ರ ನೇತೃತ್ವದಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಮಲೆನಾಡ ಸಿರಿ ಶಿಕ್ಷಕ ಪ್ರಶಸ್ತಿ 2022ರ ವಿಜೇತ ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಕುರುಂಬುಡೇಲುರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ವೇದಿಕೆಯಲ್ಲಿ ಮಹಿಳಾ ಮಂಡಲದ ಕಾರ್ಯದರ್ಶಿ ಸೌಮ್ಯ ಮೂಡಾಯಿತೋಟ ಉಪಸ್ಥಿತರಿದ್ದು, ಸ್ನೇಹಿತರ ಕಲಾಸಂಘದ ನಿಕಟಪೂರ್ವಧ್ಯಕ್ಷ ಸಂಜಯ್ ನೆಟ್ಟಾರು ಸ್ವಾಗತಿಸಿ, ಮಹಿಳಾ ಮಂಡಲದ ಅಧ್ಯಕ್ಷೆ ಕುಸುಮ ಕುರುಂಬುಡೇಲು ವಂದಿಸಿದರು. ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here