ಅ 1:  ವಕ್ಫ್ ಮತ್ತು ವಿವಿಧ ಸರ್ಕಾರಿ ಇಲಾಖೆಗಳ ಮಾಹಿತಿ ಕಾರ್ಯಾಗಾರ

0

 

ಸಚಿವರು, ಆಯೋಗದ ಅಧ್ಯಕ್ಷರು, ವಕ್ಫ್ ರಾಜ್ಯ ಅಧ್ಯಕ್ಷರು , ವಿವಿಧ ಇಲಾಖಾ ಅಧಿಕಾರಿಗಳ ಆಗಮನ

ದ ಕ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮತ್ತುಸುಳ್ಯತಾಲೂಕು ಜಮಾಅತ್ ಸಮನ್ವಯ ಸಮಿತಿ ಆಶ್ರಯದಲ್ಲಿ ಅ.1ರಂದು ವಕ್ಫ್ಇಲಾಖೆ, ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ,ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆ, ಅರೋಗ್ಯ ಇಲಾಖೆಗಳ ಮಾಹಿತಿ ಕಾರ್ಯಾಗಾರ ಸುಳ್ಯ ನಾವೂರು ಅನ್ಸಾರಿಯ ಸಭಾಂಗಣದಲ್ಲಿ ನಡೆಯಲಿದೆ.

 

ಬೆಳಿಗ್ಗೆ 9:30ರಿಂದ ಮಧ್ಯಾಹ್ನ 2 ಗಂಟೆ ತನಕ ನಡೆಯಲಿರುವ ಕಾರ್ಯಗಾರದಲ್ಲಿ ಅಲ್ಪಸಂಖ್ಯಾತರ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಲಿದ್ದಾರೆ.
ಕರ್ನಾಟಕ ಸರ್ಕಾರದ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್ ಅಂಗಾರ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್, ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷ ಮೌಲನಾ ಶಾಫಿ ಸಆದಿ, ವಿಧಾನಸಭೆ ವಿಪಕ್ಷ ಉಪನಾಯಕ ಯು ಟಿ ಖಾದರ್.,ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರು ಹಾಗೂ
ವಿಧಾನಪರಿಷತ್ ಸದಸ್ಯರಾದ ಬಿ ಎಂ ಫಾರೂಕ್,ಕರ್ನಾಟಕ ಕಂದಾಯ ಇಲಾಖೆ ಜಂಟಿ ಕಾರ್ಯದರ್ಶಿ ಹಿದಾಯತುಲ್ಲಾ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಎಂ ಡಿ ನಜೀರ್ ಅಹ್ಮದ್, ವಕ್ಫ್ ಅಪರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಖಾದರ್ ಶಾ,ಅಪರ ಜಿಲ್ಲಾಧಿಕಾರಿ ಡಾ, ಕೃಷ್ಣಮೂರ್ತಿ, ಪುತ್ತೂರು ಉಪ ವಿಭಾಗಧಿಕಾರಿ ಗಿರೀಶ್ ನಂದನ್ ಎಂ,ಪುತ್ತೂರು ಪೊಲೀಸ್ ಉಪಾದೀಕ್ಷರಾದ ಡಾ. ವೀರಣ್ಣ ಹೀರೇಮಠ್, ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯರುಗಳಾದ ಟಿ ಎಂ ಶಹೀದ್,ಎಸ್ ಸಂಶುದ್ದಿನ್, ಜಿಲ್ಲಾ ವಕ್ಫ್ ಅಧ್ಯಕ್ಷ ನಾಸಿರ್ ಲಕ್ಕಿ ಸ್ಟಾರ್
ವಕ್ಫ್ ಅಧಿಕಾರಿ ಮುಅಝೀನ್, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜೇಮ್ಸ್ ಕುಟಿನ್ಹ, ಜಿಲ್ಲಾ ಕೆಎಂಡಿಸಿ ವ್ಯವಸ್ಥಾಪಕರು ಯಶೋದರ, ಹಿರಿಯ ಕಾರ್ಮಿಕ ಅಧಿಕಾರಿ ಗಣಪತಿ ಹೆಗ್ಡೆ, ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ನವೀನಚಂದ್ರ ಜೋಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ್, ಸುಳ್ಯ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ , ಅಡ್ವೋಕೇಟ್ ಹನೀಫ್ ಹುದವಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಮನ್ವಯ ಸಮಿತಿ ಸಂಚಾಲಕ ಹಾಜಿ ಕೆ ಎಂ ಮುಸ್ತಫ,ಸ್ವಾಗತ ಸಮಿತಿ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ,ಜಿಲ್ಲಾ ವಕ್ಫ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಮೊಗರ್ಪಣೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here