ಮಡಪ್ಪಾಡಿ ಗ್ರಾಮ ಪಂಚಾಯತ್ ನ “ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನ “ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭವು ಸೆ.29ರಂದು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎನ್. ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಉಪಾಧ್ಯಕ್ಷೆ ಉಷಾ ಜಯರಾಂ, ಸದಸ್ಯರು , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಪೂಂಬಾಡಿ, ಆಶಾ ಕಾರ್ಯಕರ್ತೆ, ಅಂಗನವಾಡಿ ಕಾರ್ಯಕರ್ತೆ, ಸಂಜೀವಿನಿ ಸಂಘದ ಸದಸ್ಯರು, ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.