ಕಾಯರ್ತೋಡಿ ಶ್ರೀ ರಕ್ತೇಶ್ವರಿ ಕ್ಷೇತ್ರದಲ್ಲಿ ದೈವಸ್ಥಾನದ ಜೀರ್ಣೋದ್ಧಾರಕ್ಕೆ ಕುಟ್ಟಿಮುಹೂರ್ತ

0

ಕಾಯರ್ತೋಡಿ ಶ್ರೀ ರಕ್ತೇಶ್ವರಿ ಕ್ಷೇತ್ರದ ಜೀರ್ಣೋಧ್ಧಾರವು ಕುಂಟಾರು ಶ್ರೀ ರವೀಶ ತಂತ್ರಿಯವರ ನೇತೃತ್ವದಲ್ಲಿ ವಾಸ್ತುಶಿಲ್ಪಿ ರಮೇಶ್ ಕಾರಂತರವರ ವಾಸ್ತುಶಿಲ್ಪದ ಪ್ರಕಾರ ರಾಧಾಕೃಷ್ಣ ಆಚಾರ್ಯ ಸಮ್ಮುಖದಲ್ಲಿ ಶ್ರೀ ಕ್ಷೇತ್ರದ ನಿರ್ಮಾಣಕ್ಕೆ ಕುಟ್ಟಿಪೂಜಾ ಕಾರ್ಯಕ್ರಮವು ಸೆ.೩೦ರಂದು ನಡೆಯಿತು. ಕಾರ್ಯಕ್ರಮದಲ್ಲಿ ಜೀರ್ಣೋಧ್ಧಾರ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇವಾ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಊರ ಹಾಗೂ ಪರವೂರ ಭಕ್ತಾಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.