ಸುಳ್ಯ ತಾಲೂಕು ಜಮಾಅತ್ ಸಮನ್ವಯ ಸಮಿತಿ ವತಿಯಿಂದ ವಿವಿಧ ಇಲಾಖೆಗಳ ಮಾಹಿತಿ ಕಾರ್ಯಗಾರ

0

ಸುಳ್ಯ ತಾಲೂಕು ಜಮಾಅತ್ ಸಮನ್ವಯ ಸಮಿತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿ, ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ಮಾಹಿತಿ ಕಾರ್ಯಗಾರ ಮತ್ತು ಅಹವಾಲು ಸ್ವೀಕಾರ: ಮಾದಕ ದ್ರವ್ಯ ವಿರೋಧಿ ಜಾಗೃತಿ ಆಂದೋಲನ ಕಾರ್ಯಕ್ರಮ ಇಂದು ನಾವೂರು ಅನ್ಸಾರಿಯ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಕ್ಫ್ ಇಲಾಖೆ, ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕಾರ್ಮಿಕ ಇಲಾಖೆ, ಅರೋಗ್ಯ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ನೀಡಿದರು.
ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗದ ಅಹವಾಲು ಸ್ವೀಕಾರ ಹಾಗು ಮಾದಕ ದ್ರವ್ಯ ವಿರೋಧಿ ಜಾಗೃತಿ ಆಂದೋಲನ ಇದೇ ವೇದಿಕೆಯಲ್ಲಿ ನಡೆಯಿತು.

ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್ ಲಕ್ಕಿಸ್ಟಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಕಾರ್ಯಗಾರವನ್ನು ಉದ್ಘಾಟಿಸಿದರು.
ಸುಳ್ಯ ತಹಶೀಲ್ದಾರ್ ಕು.ಅನಿತಾ ಲಕ್ಷ್ಮಿ ವಿವಿಧ ಇಲಾಖೆಗಳ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯರಾದ ಟಿ.ಎಂ.ಶಹೀದ್ ತೆಕ್ಕಿಲ್, ಎಸ್.ಸಂಶುದ್ದೀನ್, ಕೆಪೆಕ್ ಮಾಜಿ ನಿರ್ದೇಶಕ ಹಾಜಿ ಪಿ ಎ ಮಹಮ್ಮದ್, ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸಿರಾಜುದ್ದೀನ್, ಜಾವಗಲ್ ದರ್ಗಾ ಶರೀಫ್ ಅಧ್ಯಕ್ಷ ಪಿ.ಇಸಾಕ್ ಸಾಹೇಬ್ ಪಾಜಪಳ್ಳ, ನಗರ ಪಂಚಾಯತ್ ಸದಸ್ಯರಾದ ಕೆ.ಎಸ್.ಉಮ್ಮರ್, ಶರೀಫ್ ಕಂಠಿ, ರಿಯಾಝ್ ಕಟ್ಟೆಕ್ಕಾರ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್, ತಾ.ಪಂ‌.ಮಾಜಿ ಸದಸ್ಯ ಅಬ್ದುಲ್ ಗಫೂರ್ಕಲ್ಮಡ್ಕ , ಅನ್ಸಾರುಲ್ ಮುಸ್ಲಿಮಿನ್ ಎಸೋಸಿಯೇಶನ್ ಅಧ್ಯಕ್ಷ ಅಬ್ದುಲ್ ಶುಕೂರ್, ಸುನ್ನಿ ಮಹಲ್ ಫೆಡರೇಶನ್ ಅಧ್ಯಕ್ಷ ಎಸ್.ಎ. ಹಮೀದ್, ಸುಳ್ಯ ತಾಲೂಕು ಜಮೀಯತುಲ್ ಫಲಾಹ್ ಅಧ್ಯಕ್ಷ ಹಸೈನಾರ್ ಹಾಜಿ ಗೋರಡ್ಕ, ಅನ್ಸಾರಿಯಾ ಎಜ್ಯುಕೇಶನ್ ಸೆಂಟರ್‌ ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ, ದ.ಕ.ಜಿಲ್ಲಾ ಕೆ.ಎಂ.ಸಿ.ಸಿ. ಕೋಶಾಧಿಕಾರಿ ಹಾಜಿ ಇಬ್ರಾಹಿಂ ಕತ್ತರ್ ಮಂಡೆಕೊಲು,ವಕೀಲರಾದ ಅಬೂಬಕ್ಕರ್ ಅಡ್ಕಾರ್, ಫವಾಜ್ ಕನಕಮಜಲು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ಕಾರ್ಯದರ್ಶಿ ಇಬ್ರಾಹಿಂ ಗೂನಡ್ಕ, ಅಬ್ಬಾಸ್ ಸಂಟ್ಯಾರ್ ಅತಿಥಿಗಳಾಗಿದ್ದರು.
ಕಾವು ಮಾಡನ್ನೂರಿನ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ಪ್ರಾಂಶುಪಾಲ ಹನೀಫ್ ಹುದವಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕುರಿತು ಮಾತನಾಡಿದರು. ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ನಂದಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಆರೋಗ್ಯ ಮಿತ್ರ ಮುರಳಿ ಚೊಕ್ಕಾಡಿ, ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಗಣಪತಿ ಹೆಗ್ಡೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮಂಜುನಾಥ್, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಯಶೋಧರ, ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಮುಅಝಮ್ ಭಾಗವಹಿಸಿ ಮಾಹಿತಿ ನೀಡಿದರು. ಕಾರ್ಯಕ್ರಮದ ಸ್ವಾಗತ ಸಮಿತಿ ಸಂಚಾಲಕ ಮಹಮ್ಮದ್ ಇಕ್ಬಾಲ್ ಎಲಿಮಲೆ ಸ್ವಾಗತಿಸಿ,
ಜಿಲ್ಲಾ ವಕ್ಫ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಮೊಗರ್ಪಣೆ ವಂದಿಸಿದರು. ಸಮನ್ವಯ ಸಮಿತಿ ಸಂಚಾಲಕ ಹಾಜಿ ಕೆ ಎಂ ಮುಸ್ತಫ ಜನತಾ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಗಾರದಲ್ಲಿ ಸುಳ್ಯ ತಾಲೂಕಿನ ವಿವಿಧ ಭಾಗಗಳ ಮಸೀದಿ ಆಡಳಿತ ಕಮಿಟಿಯ ಪದಾಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿ ಅಧ್ಯಕ್ಷ ನಾಸಿರ್, ದಕ್ಷಿಣ ಕನ್ನಡ ಜಿಲ್ಲಾ ಬೋರ್ಡ್ ಸಮಿತಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಮೊಗರ್ಪಣೆ ಅವರಿಗೆ ಸಮಿತಿ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಅಧಿಕಾರಿ ಮೊಅಝಮ್ ಮಸ್ಜಿದ್ ಒನ್ ಕಾರ್ಯಕ್ರಮದ ಮೂಲಕ ಮಸ್ಜಿದ್ ಅಭಿವೃದ್ಧಿ ಕಾರ್ಯದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಸಿದರು.
ಸುಳ್ಯ ತಾಲೂಕು ಅಲ್ಪಸಂಖ್ಯಾತರ ಇಲಾಖೆಯ ಮಾಹಿತಿ ವಿಭಾಗದ ಅಧಿಕಾರಿ ಕಮಲ್ ಮತ್ತು ಸಮನ್ವಯ ಸಮಿತಿ ಪದಾಧಿಕಾರಿಗಳು ಮಾಹಿತಿ ಕಾರ್ಯಗಾರದಲ್ಲಿ ಸಹಕರಿಸಿದರು.