ಬಾಳಿಲ ಗ್ರಾಮ ಪಂಚಾಯತ್ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0
73

 

ಸುದ್ದಿ ಜನಾಂದೋಲನದ ಲಂಚ, ಭ್ರಷ್ಟಾಚಾರ ನಿರ್ಮೂಲನೆ ಫಲಕ ಅನಾವರಣ

ಬಾಳಿಲ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅ.01 ರಂದು ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಸುದ್ದಿ ಪತ್ರಿಕೆ ವತಿಯಿಂದ ಹಮ್ಮಿಕೊಂಡಿದ್ದ ಲಂಚ,ಭ್ರಷ್ಟಾಚಾರ ನಿರ್ಮೂಲನೆ ಆಂದೋಲನದ ಫಲಕವನ್ನು ಅನಾವರಣಗೊಳಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತ ಚಾಕೋಟೆ ಫಲಕ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ರವೀಂದ್ರ ರೈ ಟಪ್ಪಾಲುಕಟ್ಟೆ, ಹರ್ಷ ಜೆ., ಪಾವನ ಜೋಗಿಬೆಟ್ಟು, ಕಾರ್ಯದರ್ಶಿ ಜಯಶೀಲ ರೈ, ಆಶಾಕಾರ್ಯಕರ್ತೆಯರು, ಎ.ಎನ್.ಎಂ, ಸಂಜೀವಿನಿ ಸಂಘದ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗದವರು ,ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹೂವಪ್ಪ ಗೌಡ ಸ್ವಾಗತಿಸಿ, ಪಂಚಾಯತ್ ಸಿಬ್ಬಂದಿ ಬಾಬು ಎಂ.ವಂದಿಸಿದರು.
ಬಳಿಕ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಬಸ್ಸು ತಂಗುದಾಣ ಹಾಗೂ ಸಾರ್ವಜನಿಕ ಮುಖ್ಯ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ,ಗ್ರಾಮ ಮಟ್ಟದ ಇಲಾಖೆ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here