ಮುರ್ಕೆತ್ತಿ ಅಂಗನವಾಡಿ ಕೇಂದ್ರ ದಲ್ಲಿ ಗಾಂಧಿ ಜಯಂತಿ

0

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ಮಹಾತ್ಮ ಗಾಂಧೀಜಿ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.
ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯ ಸಚಿನ್ ರಾಜ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.


ಸಭಾಧ್ಯಕ್ಷತೆ ಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ವಹಿಸಿದ್ದರು. ವೇದಿಕೆಯಲ್ಲಿ ಜ್ಞಾನ ದೀಪ ಸ್ತ್ರಿಶಕ್ತಿ ಸ್ವಸಹಾಯ ಸಂಘ ಅಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಪೋಷಕರು, ಜ್ಞಾನ ದೀಪ ಸ್ತ್ರಿಶಕ್ತಿ ಸ್ವಸಹಾಯ ಸಂಘ ಸದಸ್ಯರು ಹಾಜರಿದ್ದರು.

ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ ಕಾರ್ಯಕ್ರಮ ನಿರೂಪಿಸಿದರು.ಬಾಲವಿಕಾಸ ಸಮಿತಿ ಸದಸ್ಯ ಮಹಮ್ಮದ್ ಶರೀಫ್ ಸಿಹಿ ತಿಂಡಿ ವ್ಯವಸ್ಥೆ ಗೊಳಿಸಿದರು.ಕು. ಖುಷಿ ಪ್ರಾರ್ಥನೆ ಗೈದರು.