ಮುರ್ಕೆತ್ತಿಯಲ್ಲಿ ಸ್ವಚ್ಚತಾ ಕಾರ್ಯ ಹಾಗೂ ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

0

 

ಪೆರುವಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುರ್ಕೆತ್ತಿ ಅಂಗನವಾಡಿ ಕೇಂದ್ರದಲ್ಲಿ ಬಾಲವಿಕಾಸ ಮತ್ತು ಜ್ಞಾನದೀಪ ಸ್ತ್ರಿಶಕ್ತಿ ಸ್ವಸಹಾಯ ಸಂಘ ಸದಸ್ಯರಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ ನಡೆಯಿತು.

ಶ್ರೀಮತಿ ಸುಧಾಕ್ಷಿಣಿ ಸಂತೋಷ್ ಪೆಲತ್ತಡ್ಕ ಇವರು ಅಂಗನವಾಡಿ ಮಕ್ಕಳಿಗೆ ಚಯರ್ ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸಚಿನ್ ರಾಜ್ ಶೆಟ್ಟಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಚಂದ್ರಾವತಿ, ಹಾಗೂ ಪೋಷಕರು, ಜ್ಞಾನ ದೀಪ ಸ್ತ್ರಿಶಕ್ತಿ ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.