ಲಂಚ,ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ
ಗಾಂಧೀ ಜಯಂತಿ ಬೆಳ್ಳಾರೆ ಜ್ಞಾನದೀಪ ಇಂಟರ್ಯಾಕ್ಟ್ ಕ್ಲಬ್ ವತಿಯಿಂದ ಬೆಳ್ಳಾರೆಯಿಂದ ಪೆರುವಾಜೆವರೆಗೆ ಗಾಂಧೀ ನಡಿಗೆಯ ಮುಲಕ ಪಂಚಾಯತ್ ದರ್ಶನ ಕಾರ್ಯಕ್ರಮ ಹಾಗು ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ವಿದ್ಯಾರ್ಥಿಗಳು ಸೇರಿದಂತೆ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರು ನಡಿಗೆಯ ಮೂಲಕ ಪೆರುವಾಜೆ ಗ್ರಾಮ ಪಂಚಾಯತ್ ಗೆ ತೆರಳಿ ಪಂಚಾಯತ್ ನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಸ್ವಚ್ಛತೆ ಮತ್ತು ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯ ಬಗ್ಗೆ ಹಾಗು ಲಂಚ ಭ್ರಷ್ಟಾಚಾರದ ವಿರುದ್ಧ ಪ್ರತಿಜ್ಞೆ ಸ್ವೀಕರಿಸಿದರು. ಬಳಿಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.