ಸುಳ್ಯ : ಸೈಂಟ್ ಜೋಸೆಫ್ ಶಾಲೆಯಲ್ಲಿ ಗಾಂಧಿಜಯಂತಿ ಆಚರಣೆ

0

 

ಸುಳ್ಯದ ಸೈಂಟ್ ಜೋಸೆಫ್ ಶಾಲೆಯಲ್ಲಿ ಅ.02 ರಂದು ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ಫಾ.ವಿಕ್ಟರ್ ಡಿ’ಸೋಜಾರವರು ವಹಿಸಿದ್ದರು. ಪ್ರೌಢ ಶಾಲಾ ಪೋಷಕ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್‌, ಶಾಲಾ ಮುಖ್ಯೋಪಾಧ್ಯಾಯಿನಿ ಸಿ. ಬಿನೋಮ, ಪ್ರೌಢ ಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ, ಕಾರ್‍ಯದರ್ಶಿಗಳಾದ ಶ್ರೀಮತಿ ಚೇತನಾ ಹಾಗೂ ಶ್ರೀಮತಿ ಮಮತಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಗಾಂಧೀಜಿ ಹಾಗೂ ಲಾಲ್‌ಬಹದ್ದೂರು ಶಾಸ್ತ್ರಿಯವರ ಭಾವಚಿತ್ರದ ಎದುರು ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಶಾಲಾ ಶಿಕ್ಷಕ ಭಾನುಪ್ರಕಾಶ್ ಸ್ವಾಗತಿಸಿದರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನೆರವೇರಿತು. ನಂತರ ಸ್ಕೌಟ್ಸ್ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿದರು. ಶಾಲಾ ವಿದ್ಯಾರ್ಥಿನಿ ಮರಿಯಂ ಹುದಾ ಗಾಂಧಿಜಯಂತಿ ದಿನದ ಮಹತ್ವದ ಬಗ್ಗೆ ಮಾತನಾಡಿದರು, ಶಿಕ್ಷಕಿ ಶ್ರೀಮತಿ ಗೀತಾಲಕ್ಷ್ಮಿ ವಂದನಾರ್ಪಣೆ ಗೈದರು.ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಚೈತ್ರರವರು ನಿರ್ವಹಿಸಿದರು. ಶಾಲಾ ಶಿಕ್ಷಕ ವರ್ಗ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮಕ್ಕೆ ಸಹಕರಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.