ಸುಳ್ಯ ಸ. ಜೂನಿಯರ್ ಕಾಲೇಜ್ ನಲ್ಲಿ ಗಾಂಧಿ ಜಯಂತಿ, ಹಾಗೂ ಸ್ವಚ್ಛತಾ ಕಾರ್ಯಕ್ರಮ

0

ಸುಳ್ಯ ಸರಕಾರಿ ಜೂನಿಯರ್ ಕಾಲೇಜ್ ಪ್ರೌಢಶಾಲಾ ವಿಭಾಗದಲ್ಲಿ ಗಾಂಧಿ ಜಯಂತಿ ಹಾಗೂ ವಿದ್ಯಾರ್ಥಿಗಳಿಂದ ಕೀರ್ತನೆ, ಮತ್ತು ಶಾಲಾ ಪರಿಸರ ಸ್ವಚ್ಛತಾ ಕಾರ್ಯಕ್ರಮ ಇಂದು ನಡೆಯಿತು.
ಸಭಾ ವೇದಿಕೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ನಂತರ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಕೀರ್ತನೆ ಭಗವದ್ಗೀತೆ ಶ್ಲೋಕ, ಕುರಾನ್ ಪಾರಾಯಣ, ಬೈಬಲ್ ಗೀತೆಗಳೊಂದಿಗೆ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಶಿಕ್ಷಕರು ಮತ್ತು ಎಸ್‌ಡಿಎಂಸಿ ಸದಸ್ಯರಿಂದ ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆಗಳ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷೆ ರಾಜೇಶ್ವರಿ ಕಾಡು ತೋಟ ವಹಿಸಿದ್ದರು. ಶಾಲಾ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದ್ದರು.
ಶಿಕ್ಷಕ ಸುಂದರ ಕೆನಾಜೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ವಿಜ್ಞಾನ ವಿಭಾಗದ ಶಿಕ್ಷಕಿ ಶ್ರೀಮತಿ ರೇಣುಕಾ ವಂದಿಸಿದರು.
ನಂತರ ಶಾಲಾ ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು.