ಅಲೆಕ್ಕಾಡಿ : ಪುಷ್ಪಾವತಿಯವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಸನ್ಮಾನ ಕಾರ್ಯಕ್ರಮ

0

 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಮುರುಳ್ಯ ಬಾಲ ಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಸುಮಾರು ಹನ್ನೊಂದು ವರ್ಷ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀಮತಿ ಪುಷ್ಪಾವತಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಸೆ. ೩೦ರಂದು ಮುರುಳ್ಯ ಅಲೆಕ್ಕಾಡಿ ಸರಕಾರಿ ಶಾಲೆಯಲ್ಲಿ ನಡೆಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಅಧ್ಯಾಪಕ ವೆಂಕಪ್ಪಗೌಡ ಆಲಾಜೆ ದೀಪ ಪ್ರಜ್ವಲನೆ ಮಾಡಿದರು.
ವೇದಿಕೆಯಲ್ಲಿ ಮುರುಳ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕು. ಜಾನಕಿ ಮುರುಳ್ಯ, ನಿವೃತ್ತ ಉಪತಹಶೀಲ್ದಾರ್ ಜನಾರ್ದನ ಅಲೆಕ್ಕಾಡಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ, ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ಶ್ರೀಮತಿ ಮಧು ಪಿ. ಆರ್., ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ನೂಜಾಡಿ,
ಹಿರಿಯ ಪೋಷಕರಾದ ಗುಣವತಿ ನಾವೂರು ಉಪಸ್ಥಿತರಿದ್ದರು.
ಸಭೆಯಲ್ಲಿ ಸಿಆರ್ ಪಿ . ಜಯಂತ ಕೆ. ಎಣ್ಮೂರು, ನರ್ಲಡ್ಕ ಪಡ್ಪಿನಂಗಡಿ, ಶಾಂತಿನಗರ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರು, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ಮಕ್ಕಳ ಪೋಷಕರು, ಅಂಗನವಾಡಿ ಕೇಂದ್ರದ ಪುಟಾಣಿಗಳು ಇದ್ದರು. ಮಕ್ಕಳ ಮನೆ ಸಮಿತಿ ಅಧ್ಯಕ್ಷ ಅವಿನಾಶ್ ದೇವರ ಮಜಲು ಸನ್ಮಾನಪತ್ರ ವಾಚಿಸಿದರು. ಶ್ರೇಯಾ ಮತ್ತು ಬಳಗ ಪ್ರಾರ್ಥಿಸಿದರು. ಶ್ರೀಮತಿ ರೇವತಿ ರಘುನಾಥ ಎಂಜೀರು ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹೇಮಾವತಿ ಎಚ್.ಎಲ್. ವಂದಿಸಿದರು. ಸನ್ಮಾನ ಸ್ವೀಕರಿಸಿದ ಪುಷ್ಪಾವತಿಯವರು ಅಂಗನವಾಡಿ ಕೇಂದ್ರಕ್ಕೆ ಟೀಪಾಯಿ ಕೊಡುಗೆಯಾಗಿ ನೀಡಿದರು.

LEAVE A REPLY

Please enter your comment!
Please enter your name here