ಬೆಳ್ಳಾರೆಯಲ್ಲಿ ಉಚಿತ ಅಭಾ ಕಾರ್ಡ್ ನೋಂದಣಿ ಶಿಬಿರ

0

 

ಬೆಳ್ಳಾರೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಮೈಸ್ ಕಂಪ್ಯೂಟರ್ ನ ಸಹಯೋಗದೊಂದಿಗೆ ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಗಿರೀಶ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗ್ರಾ. ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮೈಸ್ ಕಂಪ್ಯೂಟರ್ ನ ಮಾಲಕ ಹರೀಶ್ ನೂಜಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.