ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

0
20

 


ಅ. 2ರಂದು ಗಾಂಧಿ ಜಯಂತಿಯ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ನಗರದ ಮೇರಿಹಿಲ್ ನಲ್ಲಿ ಇರುವ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಕಚೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ “ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು, ಅವರ ಆದರ್ಶಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ತುರ್ತು ಅಗತ್ಯ ಈಗ ಇದೆ. ಪ್ರತಿಯೊಬ್ಬರಲ್ಲಿಯೂ ಗಾಂಧೀಜಿಯವರ ಮತ್ತು ಶಾಸ್ತ್ರೀ ಜಿಯವರ ಆದರ್ಶಗಳು ಇದ್ದರೂ ಯಾರು ಅದನ್ನು ಪರಿಣಾಮಕಾರಿಯಾಗಿ ಪಾಲಿಸುತ್ತಿಲ್ಲ. ಈ ಸುಪ್ತವಾಗಿರುವ ಪ್ರಜ್ಞೆಗಳನ್ನು ಬಡಿದೆಬ್ಬಿಸಬೇಕಾದ ತುರ್ತು ಅಗತ್ಯ ಇದೆ. ಆಗ ಮಾತ್ರ ಸುಭೀಕ್ಷ ಹಾಗೂ ಆರೋಗ್ಯ ಪೂರ್ಣ ಭವ್ಯ ಭಾರತದ ನಿರ್ಮಾಣ ಸಾಧ್ಯ ಮತ್ತು ಗಾಂಧೀಜಿಯವರು ಕನಸು ಕಂಡ ರಾಮ ರಾಜ್ಯ ನಿರ್ಮಾಣ ಸಾಧ್ಯವಿದೆ ” ಎಂದು ನುಡಿದರು.
ಈ ಸಂದರ್ಭದಲ್ಲಿ ಮಂಗಳೂರು ಘಟಕಾದಿಕಾರಿ ಮಾರ್ಕ್ ಸೆರಾ, ಗೃಹರಕ್ಷಕ ದಿವಾಕರ್ ಗೃಹರಕ್ಷಕಿಯರಾದ ರೇವತಿ ದಿನೇಶ್,ಮರಿಯಾ ಮತ್ತು ಜಯಂತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here