ಕೆ.ವಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆ

0
127

 

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಇದರ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರ ಮಾರ್ಗದರ್ಶನದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆ ದಿನಾಂಕ ೦೩.೧೦.೨೦೨೨ ರಂದು ನಡೆಯಿತು.
ಬೆಳಗ್ಗೆ ಕೆ.ವಿ.ಜಿ ಹೆಚ್.ಟಿ ಪವರ್ ಹೌಸ್‌ನಲ್ಲಿ ಗಣಪತಿ ಹವನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಿ ನಂತರ ವಿವಿಧ ಶಿಕ್ಷಣ ಸಂಸ್ಥೆಗಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಗ್ಗೆ ಕೆ.ವಿ.ಜಿ ಐ.ಪಿ.ಎಸ್‌ನಲ್ಲಿ ದೀಪಾಂಜಲಿ ಭಜನೆ ತಂಡದವರಿಂದ ಭಜನೆ ಸಂಕೀರ್ತನೆ ನಡೆಯಿತು. ನಂತರ ಶಾರದಾ ಪೂಜೆ ಮತ್ತು ಮಹಾಮಂಗಳಾರತಿ ನಡೆದು, ಅನ್ನ ಸಂತಪಣೆ ನಡೆಯಿತು. ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಪ್ರಧಾನ ಕಾರ್ಯದರ್ಶಿಗಳಾದ ಡಾ. ರೇಣುಕಾ ಪ್ರಸಾದ್ ಕೆ.ವಿ, ನಿರ್ದೇಶಕರಾದ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಮೌರ್ಯ ಆರ್ ಪ್ರಸಾದ್ ಕುರುಂಜಿ ಮತ್ತು ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಊರುಬೈಲು ಹಾಗೂ ವಿವಿಧ ವಿದ್ಯಾ ಸಂಸ್ಥೆಗಳ ಆಡಳಿತ ಪರಿಷತ್ತಿನ ಸದಸ್ಯರುಗಳು, ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರುಗಳು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

LEAVE A REPLY

Please enter your comment!
Please enter your name here