ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಕಾರುಚಾಲಕರಾಗಿದ್ದ ಶತಾಯುಶಿ ಮೋನಪ್ಪ ಗೌಡ ಕೊರಂಬಡ್ಕ ನಿಧನ

0

 

ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರೂ ಅವರ ಕಾರು ಚಾಲಕರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಶಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ ಅವರು ವಯೋಸಹಜ ಅಸೌಖ್ಯದಿಂದಾಗಿ ಅ.5ರಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಅವರಿಗೆ 102 ವರ್ಷ ವಯಸ್ಸಾಗಿತ್ತು. ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರೂ ಅವರೊಂದಿಗೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗುರುತಿಸಿಕೊಂಡಿದ್ದ ಮೋನಪ್ಪ ಗೌಡರು ನೆಹರೂ ಅವರ ಕಾರು ಚಾಲಕರಾಗಿ ಸೇವೆ ಸಲ್ಲಿಸಿದ್ದರು. ಕನಕಮಜಲು ಗ್ರಾಮದ ಹಿರಿಯರಾಗಿದ್ದ ಮೋನಪ್ಪ ಗೌಡರು ಪುತ್ರ ವೆಂಕಟ್ರಮಣ ಕೊರಂಬಡ್ಕ, ಪುತ್ರಿಯರಾದ ಕಮಲ,ವಿಮಲ, ಕುಸುಮ ಸೇರಿದಂತೆ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

 

LEAVE A REPLY

Please enter your comment!
Please enter your name here