ಬಾಳಿಲದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಉದ್ಘಾಟನಾ ಕಾರ್ಯಕ್ರಮ

0

 

ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಬಾಳಿಲ-ಮುಪ್ಪೇರ್ಯ ಇದರ ಆಶ್ರಯದಲ್ಲಿ 18ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಅ. 4 ಮತ್ತು 5ರಂದು ಬಾಳಿಲ ವಿದ್ಯಾಬೋಧಿನೀ ಹಿ. ಪ್ರಾ. ಶಾಲಾ ವಠಾರದಲ್ಲಿ ಜರಗಲಿದ್ದು, ಅ. 4 ರಂದು ಬೆಳಿಗ್ಗೆ ಶಾರದಾ ದೇವಿಯ ವಿಗ್ರಹ ಆಗಮನ, ಶಾರದಾದೇವಿಯ ಪ್ರತಿಷ್ಠೆ, ಕಿರೀಟಧಾರಣೆ, ಶಾರದಾದೇವಿಗೆ ಚಿನ್ನದ ಕಾರಿಮಣಿ ಹಾಗೂ ತಾಳಿ ಸಮರ್ಪಣೆ, ಗಣಪತಿ ಹವನ, ಬಾಬು ಅಜಿಲ ಬಾಳಿಲ ಮತ್ತು ತಂಡದಿಂದ ಭಕ್ತಿ ಗಾನ ಕಾರ್ಯಕ್ರಮ ನಡೆದ ಬಳಿಕ ಉದ್ಘಾಟನಾ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳಿಲ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸವಿತಾ ಗುರುರಾಜ್ ವಹಿಸಿದ್ದರು. ಶಾರದೋತ್ಸವವನ್ನು ಉದ್ಘಾಟನೆಯನ್ನು ಕೆವಿಜಿ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ನಿವೃತ್ತ ಮುಖ್ಯಸ್ಥರಾದ ದೇರಣ್ಣ ರೈ ಬಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕಳಂಜ ಬಾಳಿಲ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಮತ್ತು ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಯಶೋಧರ ನಾರಾಲು ಭಾಗವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು, ಅಧ್ಯಕ್ಷ ಶೇಷಪ್ಪ ಪರವ, ಕಾರ್ಯದರ್ಶಿ ಪವನ್ ರೈ ಅಗಲ್ಪಾಡಿ, ಮಹಿಳಾ ಸಮಿತಿ ಅಧ್ಯಕ್ಷೆ ಶ್ರೀಮತಿ ಕಮಲ ಎಂ, ವೇದಿಕೆಯಲ್ಲಿ ಸಮಿತಿಯ ಗೌರವ ಸಲಹೆಗಾರರಾದ ಬಿ.ಎಸ್.ಎನ್.ಎಲ್ ನಿವೃತ್ತ ಅಧಿಕಾರಿ ಎ.ಕೆ. ನಾಯ್ಕ್ ಅಮೆಬೈಲು ಮತ್ತು ಅಶೋಕ್ ಶೆಟ್ಟಿ ಅರ್ಚನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಸಮಿತಿ ಕಾರ್ಯದರ್ಶಿ ಶ್ರೀಮತಿ ಮಾಲಿನೀ ಪ್ರಸಾದ್ ಸ್ವಾಗತಿಸಿ ಕೋಶಾಧಿಕಾರಿ ವೇದಾವತಿ ಸಿ ವಂದಿಸಿದರು. ಉಪಾಧ್ಯಕ್ಷೆ ಯಶೋಧ ಪೊಸೋಡು ಪ್ರಾರ್ಥಸಿದರು. ಜಾಹ್ನವಿ ಕಾಂಚೋಡು ಕಾರ್ಯಕ್ರಮ ನಿರೂಪಿಸಿದರು.

ಸಾರ್ವಜನಿಕರಿಗೆ ಮುಕ್ತ ಮತ್ತು 40 ಕೆ.ಜಿ. ವಿಭಾಗದ ಕಬಡ್ಡಿ ಪಂದ್ಯಾಟ, ಪುರುಷರಿಗೆ, ಮಹಿಳೆಯರಿಗೆ ಹಗ್ಗ ಜಗ್ಗಾಟ, ಅಂಗನವಾಡಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಿತು. ಸಾರ್ವಜನಿಕ ಮಹಿಳೆಯರಿಗೆ ಲಲಿತ ಸಹಸ್ರನಾಮ ಪಾರಾಯಣ, ಕುಂಕುಮಾರ್ಚನೆ ನಡೆಯಿತು. ಸಂಜೆ ಮೆಸ್ಕಾಂ ಸಿಬ್ಬಂದಿಗಳಾದ ಮಂಜುನಾಥ್ ಮತ್ತು ವಿಕ್ರಂರಿಗೆ ಸೇವಾ ಪುರಸ್ಕಾರ ನಡೆದ ಬಳಿಕ ಲಯನ್ ಕಿಶೋರ್ ಡಿ ಶೆಟ್ಟಿ ನಿರ್ಮಾಣದ ಲೇಲೆ ಪಾಡಡೆ ತುಳು ಹಾಸ್ಯ ನಾಟಕ ನಡೆಯಿತು. ಇಂದು ಬೆಳಿಗ್ಗೆ 10ರಿಂದ ಶ್ರೀರಾಮ ಭಜನಾ ಮಂಡಳಿ ಕಲ್ಮಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.00 ಗಂಟೆಯಿಂದ ಸಮಿತಿಯ ಗೌರವಾಧ್ಯಕ್ಷ ರಾಧಾಕೃಷ್ಣ ರಾವ್ ಯು.ರವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ಹಿಂದೂ ಜಾಗರಣ ವೇದಿಕೆಯ ಬ. ಗಣರಾಜ ಭಟ್ ಕೆದಿಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ. ಶಾಲಾ ನಿವೃತ್ತ ಶಿಕ್ಷಕ ಸೀತಾರಾಮ ರಾವ್ ಕಡಬ ಇವರಿಗೆ ರಾಮಚಂದ್ರ ಕೆದಿಲ ಸ್ಮರಣಾರ್ಥ ಶ್ರೀ ಶಾರದೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಸ್.ಎಸ್.ಎಲ್.ಸಿ. ಸಾಧಕರಿಗೆ ಮತ್ತು ವಿಶೇಷ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಮಹಾ ಅನ್ನಸಂತರ್ಪಣೆ ಬಳಿಕ ತಾಳನಿನಾದಂ ಭಜನಾ ತಂಡ ಪಡ್ಪಿನಂಗಡಿ ಇವರಿಂದ ಕುಣಿತ ಭಜನೆ ನಡೆಯಲಿದೆ. ಅಪರಾಹ್ನ ಕುಣಿತ ಭಜನೆ, ಚೆಂಡೆವಾದನ ಗೊಂಬೆ ಕುಣಿತ, ಬ್ಯಾಂಡ್ ವಾದನ ಸೇರಿದಂತೆ ವಿಶೇಷ ಆಕರ್ಷಣೆಯೊಂದಿಗೆ ಶ್ರೀ ಶಾರದಾ ದೇವಿಯ ಶೋಭಾಯಾತ್ರೆ ನಡೆಯ ಬೊಮ್ಮಣಮಜಲು ಹೊಳೆಯಲ್ಲಿ ಜಲಸ್ಥಂಭನ ನಡೆಯುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ.