ಮುಕ್ಕೂರು ಶ್ರೀ ಶಾರದೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

0

 

ಭಕ್ತಿ,ಶ್ರದ್ಧೆಯಿಂದ ಮಾಡಿದ ಕೆಲಸ ಪರಿಪೂರ್ಣ – ಗಿರಿಶಂಕರ ಸುಲಾಯ

ಯಾವುದೇ ಕೆಲಸವನ್ನು ಮಾಡುವಾಗ ಅದನ್ನು ಪರಿಪೂರ್ಣವಾಗಿ ಮಾಡಬೇಕು. ಸಾಮಾಜಿಕ ಚಟುವಟಿಕೆಗಳಲ್ಲಿ ನಾವು ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು.ಭಕ್ತಿ ಶ್ರದ್ದೆಯಿಂದ ಮಾಡಿದ ಕೆಲಸ ಪರಿಪೂರ್ಣವಾಗಿರುತ್ತದೆ ಎಂದು
ಸವಣೂರು ಹಿಂದೂ ಜಾಗರಣಾ ವೇದಿಕೆ ಗೌರವಾಧ್ಯಕ್ಷ ಗಿರಿಶಂಕರ ಸುಲಾಯ ಹೇಳಿದರು.

ಅವರು ಮುಕ್ಕೂರು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ಶಾರದೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಹಿಂದೂ ಧರ್ಮ ಶ್ರೇಷ್ಟ ಧರ್ಮ.ನಾವು ಪ್ರಕೃತಿಯ ಆರಾಧಕರು.ಧಾರ್ಮಿಕ ಶ್ರದ್ಧಾ ಕೇಂದ್ರಗಳಿಂದ ಧರ್ಮ ಜಾಗೃತಿಯಾಗುತ್ತದೆ ಎಂದು ಅವರು ಹೇಳಿದರು.
ಮುಕ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದಯಾಕರ ಆಳ್ವ ಬೋಳಕುಮೇರುರವರು ಮಾತನಾಡಿ ಎಲ್ಲರ ಸಹಕಾರದಿಂದ ಯಶಸ್ವಿಯಾಗಿ ಶಾರದೋತ್ಸವ ನಡೆಯುತ್ತಿದೆ ಮುಂದೆಯೂ ಉತ್ತಮವಾಗಿ ನಡೆದು ದಶಮಾನೋತ್ಸವವನ್ನು ಸಂಭ್ರಮದಿಂದ ಆಚರಿಸುವಂತಾಗಲಿ ಎಂದು ಹೇಳಿದರು.
ಶಾರದೋತ್ಸವ ಸಮಿತಿ ಅಧ್ಯಕ್ಷ ಕಿರಣ್ ಚಾಮುಂಡಿಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ವೇದಿಕೆಯಲ್ಲಿ ಪ್ರಗತಿಪರ ಕೃಷಿಕ ಸಂತೋಷ್ ರೈ ಕಾಪು, ಸೌದಿ ಅರೇಬಿಯಾದಲ್ಲಿ ಉದ್ಯೋಗಿಯಾಗಿರುವ ಬಾಲಕೃಷ್ಣ ಗೌಡ ಕಂಡಿಪ್ಪಾಡಿ, ವೈದಿಕರಾದ ಪತಂಜಲಿ ಶಾಸ್ತ್ರಿ ಉಪಸ್ಥಿತರಿದ್ದರು.
ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯ.ಸ.ಸದಸ್ಯ ನಾರಾಯಣ ಕೊಂಡೆಪ್ಪಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.ಕು.ಪುಣ್ಯ.ಕು.ಅಂಕಿತಾ ಪ್ರಾರ್ಥಿಸಿ, ಕು.ವೀಕ್ಷಾ, ಕು.ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿ, ಶಾರದೋತ್ಸವ ಸಮಿತಿ ಕಾರ್ಯದರ್ಶಿ ಸುದೀಪ್ ಕುಮಾರ್ ಕೊಂಡೆಪ್ಪಾಡಿ ವಂದಿಸಿದರು.
ಬೆಳಿಗ್ಗೆ ಶ್ರೀ ಶಾರದಾ ದೇವಿಯ ಪ್ರತಿಷ್ಠೆ, ಗ್ರಾಮಸ್ಥರಿಗೆ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಗಂಟೆ 10.00 ರಿಂದ ವಿದ್ಯಾರಂಭ ( ಅಕ್ಷರಾಭ್ಯಾಸ) ಮಹಾಪೂಜೆ,ವಾಹನ ಪೂಜೆ ಇತ್ಯಾದಿ ಸೇವೆಗಳು ನಡೆಯಿತು.
ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.
ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆಯಲಿದೆ.