ಸುಳ್ಯ: ವಿಜೃಂಭಣೆಯಿಂದ ನಡೆಯುತ್ತಿರುವ ಶ್ರೀ ಶಾರದಾಂಬಾ ಉತ್ಸವ

0
176

ಮನರಂಜಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು

ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ ,ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ ಮತ್ತು ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ 51ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ – ಸುಳ್ಯ ದಸರಾ – 2022 ವೈದಿಕ,ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಕ್ಟೋಬರ್ 2 ರಂದು ಪ್ರಾರಂಭಗೊಂಡು ವಿಜೃಂಭಣೆಯಿಂದ ನಡೆಯುತ್ತಿದೆ.

ಅ.3ರಂದು ರಾತ್ರಿ 7.30ಕ್ಕೆ ವಿಠಲನಾಯಕ್ ಮತ್ತು ಬಳಗದವರಿಂದ ಗೀತಾ- ಸಾಹಿತ್ಯ- ಸಂಭ್ರಮ ಹಾಗೂ ಗಜಾನನ ನಾಟ್ಯಂಜಲಿಯ ನಿರ್ದೇಶಕಿ ಶ್ರೀಮತಿ ಸುಜಾತ ಕಲಾಕ್ಷೇತ್ರ ಮುಳ್ಳೇರಿಯ ಇವರ ಶಿಷ್ಯ ವೃಂದದವರಿಂದ ನೃತ್ಯ ಶಿಲ್ಪ ಕಾರ್ಯಕ್ರಮ ನಡೆಯಿತು.


ಅ.4 ರಂದು ರಾತ್ರಿ ಫ್ರೆಂಡ್ಸ್ ಮ್ಯೂಸಿಕಲ್ ಇವರಿಂದ ಸಂಗೀತ ರಸಮಂಜರಿ ಹಾಗೂ ಅ.5 ರಂದು ಬೆಳಿಗ್ಗೆ ಅಕ್ಷರಾಭ್ಯಾಸ ನಡೆದು, ರಾತ್ರಿ ನಂದಗೋಕುಲ ಕಲಾವಿದರು ಮಂಗಳೂರು ಇವರಿಂದ ನೃತ್ಯ ವೈಭವ ನಡೆಯಿತು.

LEAVE A REPLY

Please enter your comment!
Please enter your name here