ಅ.09 ; ಪೆರುವಾಜೆಯಲ್ಲಿ ಉಚಿತ ವೈದ್ಯಕೀಯ, ದಂತ ತಪಾಸಣೆ, ರಕ್ತದಾನ ಶಿಬಿರ

0

ಭಾವೈಕ್ಯ ಯುವಕ ಮಂಡಲ ಪೆರುವಾಜೆ ಇದರ ಪೂರ್ವಾಧ್ಯಕ್ಷರಾದ ದಿ. ಪ್ರೇಮನಾಥ ರೈ ರವರ ಸ್ಮರಣಾರ್ಥವಾಗಿ ಭಾವೈಕ್ಯ ಯುವಕ ಮಂಡಲ ಪೆರುವಾಜೆ, ಭಾವೈಕ್ಯ ಮಹಿಳಾ ಮಂಡಲ ಪೆರುವಾಜೆ, ಶ್ರೀ ಸರಸ್ವತಿ ಚಾರಿಟೇಬಲ್‌ ಟ್ರಸ್ಟ್‌ ಪುತ್ತೂರು., ಕೆ.ಎಂ.ಸಿ ಆಸ್ಪತ್ರೆ ಅತ್ತಾವರ , ಮಂಗಳೂರು, ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸಾಯನ್ಸಸ್‌, ಮಂಗಳೂರು, ರೋಟರಿ ಕ್ಯಾಂಪ್ಕೋ ರಕ್ತನಿಧಿ ಕೇಂದ್ರ ಪುತ್ತೂರು ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್‌ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿವನ್ನು ಅ.09 ಭಾನುವಾರದಂದು ಪೆರುವಾಜೆ ಗ್ರಾ. ಪಂಚಾಯತ್‌ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Blood Donation Logo Vector Images (over 3,700)
ಸಾಮಾನ್ಯ ಆರೋಗ್ಯ ತಪಾಸಣೆ, ಕಣ್ಣಿನ ತಜ್ಞರು, ಕಿವಿ ಮೂಗು ಮತ್ತು ಗಂಟಲು ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಸ್ತ್ರೀ ರೋಗ ತಜ್ಞರು, , ಮಧುಮೇಹ ತಪಾಸಣೆ ಹಾಗೂ ದಂತ ಚಿಕಿತ್ಸೆ ತಜ್ಞರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here