ನೆಲ್ಲೂರು ಕೆಮ್ರಾಜೆ : ನಾರಾಯಣ ನಾಯ್ಕ ಮುಂಡೋಕಜೆಯವರಿಗೆ ಬೀಳ್ಕೊಡುಗೆ ಸಮಾರಂಭ

0

ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತಲ್ಲಿ ಬಿಲ್ ಕಲೆಕ್ಟರ್ ಆಗಿ ನಿವೃತ್ತಿಗೊಂಡ ನಾರಾಯಣ ನಾಯ್ಕ ಮುಂಡೋಕಜೆಯವರಿಗೆ ಬೀಳ್ಕೊಡುಗೆ ಸಮಾರಂಭವು ಅ.7ರಂದು ಗ್ರಾ.ಪಂ.ಸಭಾಭವನದಲ್ಲಿ ಗ್ರಾ.ಪಂ. ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಇದೇ ಸಂದರ್ಭದಲ್ಲಿ ನಾರಾಯಣ ನಾಯ್ಕರವರನ್ನು ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮ ದಲ್ಲಿ ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಗನ್ನಾಥ ಶೆಟ್ಟಿ, ಮುಖ್ಯ. ಕಾರ್ಯನಿರ್ವಹಣಾಧಿಕಾರಿ ಸಂತೋಷ್ ನಾರ್ಣಕಜೆ, ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ದಿವಾಕರ ನಾಯಕ್ ಎರ್ಮೆಟ್ಟಿ, ರಾಧಾ ಕಿಲಾರ್ಕಜೆ, ಶುಭಾಕರ ನಾಯಕ್, ಉಪಾಧ್ಯಕ್ಷರು, ಪಂಚಾಯತ ಸದಸ್ಯರು, ಗ್ರಾಮಸ್ಥರು, ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here