ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್ ಮೂಡುಬಿದಿರೆ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ ಬಾಲಕರ ವಿಭಾಗದಲ್ಲಿ ದೊಡ್ಡತೋಟ ಶಾಲೆಯ ಮನೀಶ್ ಐದನೇ ಸ್ಥಾನ ಪಡೆದುಕೊಂಡಿರುತ್ತಾರೆ.
ಈತ ನಾರ್ಣಕಜೆ ಮಹೇಶ್ ಮಣಿಯಾಣಿ ಮತ್ತು ಮೀನಾಕ್ಷಿ ದಂಪತಿಯ ಪುತ್ರ. ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಗುರು ಸಂತೋಷ್ ಮುಂಡಕಜೆ ಮಾರ್ಗದರ್ಶನ ನೀಡಿರುತ್ತಾರೆ.