ಅ.16ರಂದು ಕನಕಮಜಲು ಪ್ರಾ.ಕೃ.ಪ.ಸ.ಸಂಘ ನಿ. ಜಾಲ್ಸೂರು ಇದರ ಶತಮಾನೋತ್ಸವ

0

 

ಸುನಿಲ್ ಕುಮಾರ್, ಅಂಗಾರ, ನಳಿನ್, ಕೋಟ, ಶೋಭಾ ಕರಂದ್ಲಾಜೆ, ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್ ಸೇರಿದಂತೆ ಗಣ್ಯರ ಆಗಮನ

ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉಪಸ್ಥಿತಿ

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಜಾಲ್ಸೂರು ಇದರ ಶತಮಾನೋತ್ಸವ ಮತ್ತು ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ಅ.16ರಂದು ಜರುಗಲಿದೆ.

ಬೆಳಿಗ್ಗೆ 9ಕ್ಕೆ ಕನಕಮಜಲಿನಲ್ಲಿರುವ ಸಂಘದ ಪ್ರಧಾನ ಕಚೇರಿಯ ಆವರಣದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಪೂರ್ವಾಹ್ನ 10ಕ್ಕೆ ಸಹಕಾರಿ ಸಂಘದ ವತಿಯಿಂದ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಅಡ್ಕಾರು ಗೋದಾಮು ಕಟ್ಟಡವನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಉದ್ಘಾಟನೆಗೊಳಿಸಲಿದ್ದಾರೆ. ಬಳಿಕ 10.45ರಿಂದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಜರುಗಲಿರುವ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ “ರೈತ ಜಾತ್ರೆ” ಯನ್ನು ಮಂಗಳೂರಿನ ಕ್ಯಾಂಪ್ಕೋ ಲಿಮಿಟೆಡ್ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಲಿದ್ದಾರೆ.
ಬಳಿಕ ಶ್ರೀ ಕಾರ್ತಿಕೇಯ ಸಭಾಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶತಮಾನೋತ್ಸವದ ಸವಿನೆನಪಿಗಾಗಿ ಹೊರತರಲಾಗುವ ಸ್ಮರಣಸಂಚಿಕೆಯನ್ನು ಸಂಸದ ನಳಿನ್ ಕುಮಾರ್ ಕಟೀಲು ಅವರು ಬಿಡುಗಡೆಗೊಳಿಸಲಿದ್ದಾರೆ. ಪ್ರಧಾನ ಅಭ್ಯಾಗತರುಗಳಾಗಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ಬಾಲ್ಯೊಟ್ಟು ಉಪಸ್ಥಿತರಿರಲಿದ್ದಾರೆ.
ಕನಕಮಜಲು ಗ್ರಾ.ಪಂ. ಅಧ್ಯಕ್ಷ ಶ್ರೀಧರ ಕುತ್ಯಾಳ, ಕ್ಯಾಂಪ್ಕೋ ನಿರ್ದೇಶಕ ಕೃಷ್ಣ ಪ್ರಸಾದ್ ಮಡ್ತಿಲ, ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ. ನಾಯಕ್ ಸೇರಿದಂತೆ ಅತಿಥಿಗಳು ಗೌರವ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಸಂಘದಲ್ಲಿ ಮಾಜಿ ಅಧ್ಯಕ್ಷರುಗಳಿಗೆ, ಮಾಜಿ ಉಪಾಧ್ಯಕ್ಷರುಗಳಿಗೆ, ಮಾಜಿ ನಿರ್ದೇಶಕರುಗಳಿಗೆ, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಮಾಜಿ ಸಿಬ್ಬಂದಿಗಳಿಗೆ ಮತ್ತು ಸಂಘದ ವ್ಯಾಪ್ತಿಯ ವಿವಿಧ ಕ್ಷೇತ್ರಗಳ ವಿಶೇಷ ಸಾಧಕರುಗಳನ್ನು ಸಹಕಾರಿ ಸಂಘದ ವತಿಯಿಂದ ಸನ್ಮಾನಿಸಲಾಗುವುದು.
ಮಧ್ಯಾಹ್ನ ಭೋಜನದ ಬಳಿಕ ಅಪರಾಹ್ನ 2.30ರಿಂದ ನಡೆಯುವ ದೇಶೀ ಕೃಷಿ ಮತ್ತು ಪರಿಸರ ಕೃಷಿ ವಿಚಾರ ಸಂಕಿರಣಗಳಲ್ಲಿ ಶಿವಾನಂದ ಕಳವೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ.
ಅಪರಾಹ್ನ 4ರಿಂದ ಜರುಗುವ ಸಮಾರೋಪ ಸಮಾರಂಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ಯಾನಿಧಿ ಕೃಷಿ ಉಪಕರಣಗಳ ಸೇವಾ ಯೋಜನೆ, ಶತಾಬ್ದಿ ಸಾಂತ್ವನ ಯೋಜನೆ ಸೇರಿದಂತೆ ಸರ್ಕಾರದ ನೂತನ ಯೋಜನೆಗಳನ್ನು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಲೋಕಾರ್ಪಣೆಗೊಳಿಸಲಿದ್ದಾರೆ. ಶತಮಾನೋತ್ಸವ ಪ್ರಯುಕ್ತ ನಡೆದ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸಂಘದ ಹಿರಿಯ ಸದಸ್ಯರುಗಳನ್ನು ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನೆರವೇರಿಸಲಿದ್ದಾರೆ. ಪ್ರಧಾನ ಅಭ್ಯಾಗತರಾಗಿ ಎಂ. ಪ್ರತಾಪ್ ಸಿಂಹ ನಾಯಕ್ ಉಪಸ್ಥಿತರಿರಲಿದ್ದಾರೆ. ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಸಹಕಾರ ಸಂಘಗಳ ಪುತ್ತೂರು ಉಪನಿಬಂಧಕಿ ಶ್ರೀಮತಿ ತ್ರಿವೇಣಿ ರಾವ್, ತಾಲೂಕು ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಗೌರವ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಸದ್ರಿ ಸಂಘದ ಹಿರಿಯ ನೂರು ಜನ ಸದಸ್ಯರುಗಳನ್ನು ಸನ್ಮಾನಿಸಲಾಗುವುದು‌‌. ಹಾಗೂ ಸಾಂಕೇತಿಕವಾಗಿ ಸದಸ್ಯರುಗಳಿಗೆ ಶತಮಾನೋತ್ಸವದ ಸ್ಮರಣಿಕೆ ಮತ್ತು ಶತಮಾನೋತ್ಸವದ ಅಂಗವಾಗಿ ಸಂಘವು ಆಯೋಜಿಸಿದ ವಿವಿಧ ಕ್ರೀಡಾಕೂಟದ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಜರುಗಲಿದೆ.

ಸಮಾರೋಪ ಸಮಾರಂಭದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಚಿವರನ್ನೇ ಮಾಯ ಮಾಡಿದ ಮಾಂತ್ರಿಕ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಹಾಗೂ ಬಳಗದವರಿಂದ ಮಸ್ತ್ ಮ್ಯಾಜಿಕ್, ಅದ್ಬುತ ಕಾಮಿಡಿ ಶೋ ಮ್ಯಾಜಿಕ್, ವಿನೂತನ ಇಂದ್ರಜಾಲ ಪ್ರದರ್ಶನಗೊಳ್ಳಲಿದೆ.

LEAVE A REPLY

Please enter your comment!
Please enter your name here