ಸಂಪಾಜೆ : ಕಟ್ಟಡ ಕಾರ್ಮಿಕರ ವಾರ್ಷಿಕ ಸಮಾವೇಶ

0

 

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಸಂಪಾಜೆ ವಲಯ ಇದರ ವಾರ್ಷಿಕ ಸಮಾವೇಶವು ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಿನ್ನೆ ನಡೆಯಿತು.

ಕಟ್ಟಡ ಕಾರ್ಮಿಕರ ಫೆಡರೇಷನ್ ನ ಸಂಪಾಜೆ ವಲಯದ ಅಧ್ಯಕ್ಷ ಶ್ರೀಧರ ಕೆ.ಕೆ. ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಫೆಡರೇಷನ್ ನ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಫೆಡರೇಷನ್ ನ ಮಹಿಳಾ ವಿಭಾಗದ ಸಂಚಾಲಕಿ ಕುಮಾರ್ ಪ್ರಧಾನ ಭಾಷಣಗೈದರು.
ಸಿಐಟಿಯು ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ. ಜಾನಿ, ಕಟ್ಟಡ ಕಾರ್ಮಿಕರ ಫೆಡರೇಷನ್ ನ ರಾಜ್ಯ ಸಮಿತಿ ಸದಸ್ಯ ಬಿಜು ಅಗಸ್ಟಿನ್, ಕಟ್ಟಡ ಕಾರ್ಮಿಕರ ಫೆಡರೇಷನ್ ಸುಳ್ಯ ತಾಲೂಕು ಅಧ್ಯಕ್ಷ ವಿಶ್ವನಾಥ ನೆಲ್ಲಿಬಂಗಾರಡ್ಕ, ಸುಳ್ಯ ಕಟ್ಟಡ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ನಾಗರಾಜು ಹೆಚ್. ಕೆ., ಕಟ್ಟಡ ಕಾರ್ಮಿಕರ ಫೆಡರೇಷನ್ ಸುಳ್ಯ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಉಸ್ಮಾನ್ ಜಯನಗರ, ಕಟ್ಟಡ ಕಾರ್ಮಿಕರ ಫೆಡರೇಷನ್ ತಾಲೂಕು ಸಮಿತಿ ಕೋಶಾಧಿಕಾರಿ ಗಣೇಶ್ ವಿ., ಕಟ್ಟಡ ಕಾರ್ಮಿಕರ ಫೆಡರೇಷನ್ ಸಂಪಾಜೆ ವಲಯದ ಪ್ರಧಾನ ಕಾರ್ಯದರ್ಶಿ ಚಂದ್ರವಿಲಾಸ, ಕಟ್ಟಡ ಕಾರ್ಮಿಕರ ಫೆಡರೇಷನ್ ನ ಸಂಪಾಜೆ ವಲಯ ಕೋಶಾಧಿಕಾರಿ ಪ್ರಸಾದ್ ವಿ.ಆರ್. ಉಪಸ್ಥಿತರಿದ್ದರು.