ಎಸ್ಕೆಎಸ್ಸೆಸ್ಸೆಫ್ ಟ್ರೆಂಡ್ ಕರ್ನಾಟಕ ರಾಜ್ಯ ಸಮಿತಿ ಅಧ್ಯಕ್ಷರಾಗಿ ಇಕ್ಬಾಲ್ ಬಾಳಿಲ

0

 

  ಕರ್ನಾಟಕ ರಾಜ್ಯ ಎಸ್ಕೆಎಸ್ಸೆಸ್ಸೆಫ್ ಶೈಕ್ಷಣಿಕ ಕ್ಷೇತ್ರದ ಘಟಕವಾಗಿರುವ ಟ್ರೆಂಡ್ ಸಮಿತಿಯನ್ನು ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ಎಸ್ಕೆಎಸ್ಸೆಸ್ಸೆಫ್ ರಾಜ್ಯ ‌ಸಮಿತಿ ಸಭೆಯಲ್ಲಿ ರಚಿಸಲಾಯಿತು.

ಹೊಸದಾಗಿ ಅಸ್ತಿತ್ವಕ್ಕೆ ಬಂದ ಟ್ರೆಂಡ್ ರಾಜ್ಯ ಸಮಿತಿ ಅಧ್ಯಕ್ಷರಾಗಿ ಯುವ ವಾಗ್ಮಿ, ರಾಜ್ಯ ತರಬೇತುದಾರ ಇಕ್ಬಾಲ್ ಬಾಳಿಲರವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಟ್ರೆಂಡ್ ಎಂಬುವುದು ಎಸ್ಕೆಎಸ್ಸೆಸ್ಸೆಫ್ ಸಂಘಟನೆಯ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ನೀಡುವ ಉಪ ಸಮಿತಿಯಾಗಿರುತ್ತದೆ.
ಇಕ್ಬಾಲ್ ಬಾಳಿಲ ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ನಿವಾಸಿಯಾಗಿದ್ದು ಸೌಹಾರ್ದ ಭಾಷಣದ ಮೂಲಕ ಇಂದು ರಾಜ್ಯಾದ್ಯಂತ ಮನೆಮಾತಾಗಿದ್ದಾರೆ.
ಕಳೆದ ವರ್ಷ ಆದಿಚುಂಚನಗಿರಿ ಮಠದಲ್ಲಿ ಭಾಷಣ ನಡೆಸಿ ಗಮನ ಸೆಳೆದಿದ್ದಾರೆ.
ವೃತ್ತಿಯಲ್ಲಿ ಉದ್ಯಮಿಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಸಾರಥ್ಯವನ್ನು ವಹಿಸಿಕೊಂಡು ಸೇವಾ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇವರು ಎಸ್ಕೆಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಕಾರ್ಯದರ್ಶಿಯಾಗಿಯೂ ಸೇವೆ ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here