ಸುಳ್ಯ ಡಿಗ್ರಿ‌ ಕಾಲೇಜು ವಿದ್ಯಾರ್ಥಿಗಳು ರಾಜ್ಯ‌ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗಿ

0

ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿನ ವಿದ್ಯಾರ್ಥಿಗಳು ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇದರ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಕಲ್ಬುರ್ಗಿಯ ಸರ್ವಜ್ಞ ಕಾಲೇಜಿನ ಆವರಣದಲ್ಲಿ ಅ-15ರಂದು ಉದ್ಘಾಟನೆಗೊಂಡಿತು.

ಈ ಕಾರ್ಯಕ್ರಮದಲ್ಲಿ ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿ.ಎಸ್ಸಿ ವಿಭಾಗದ ವಿದ್ಯಾರ್ಥಿ ಪರೀಕ್ಷಿತ್ ಮತ್ತು ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಪ್ರತಿಕ್ಷ ಕೆ ಆರ್ ಭಾಗವಹಿಸಿ “ಪರಿಸರ ಸ್ನೇಹಿ ತಂತ್ರಜ್ಞಾನ” ಎಂಬ ವಿಭಾಗದಲ್ಲಿ ತಾವು ಸಿದ್ಧಪಡಿಸಿದ ತಂತ್ರಜ್ಞಾನ ದ ವಸ್ತುಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವು ಮಂಗಳೂರಿನ ರಥ ಬೀದಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಾಗ ಅಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು.

LEAVE A REPLY

Please enter your comment!
Please enter your name here