ಯಾದವ ಸಭಾ ಪ್ರಾದೇಶಿಕ ಸಮಿತಿ ಸುಬ್ರಹ್ಮಣ್ಯ ಇದರ ಸಭೆಯು ಅ. ೧೬ರಂದು ಬಳ್ಪದ ಹಿ.ಪ್ರಾ.ಶಾಲಾ ಆವರಣದಲ್ಲಿ ನಡೆಯಿತು. ಪ್ರಾದೇಶಿಕ ಸಮಿತಿ ಅಧ್ಯಕ್ಷ ನಾರಾಯಣ ಮಣಿಯಾಣಿಯವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ತಾಲೂಕು ಸಮಿತಿ ಕಾರ್ಯದರ್ಶಿ ಕೃಷ್ಣ ಬೆಟ್ಟ, ಮಹಿಳಾ ಘಟನದ ಅಧ್ಯಕ್ಷೆ ರಾಜೀವಿ ಪರ್ಲಿಕಜೆ, ಕೇಂದ್ರ ಸಮಿತಿಯ ಸಲಹಾ ಸಮಿತಿಯ ಸದಸ್ಯೆ ಜಯಕೃಷ್ಣ ಕಾಯರ್ತೋಡಿ, ಸುಬ್ರಹ್ಮಣ್ಯ ಪ್ರಾದೇಶಿಕ ಸಮಿತಿ ಉಪಾಧ್ಯಕ್ಷ ಪ್ರಕಾಶ್ ಮೂಡ್ನೂರು, ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಬ್ರಹ್ಮಣ್ಯ, ಬಳ್ಪ, ಕಡಬ ಈ ಮೂರು ಸಮಿತಿಗಳ ಜಂಟಿ ಆಶ್ರಯದಲ್ಲಿ ಸುಬ್ರಹ್ಮಣ್ಯ ಪ್ರಾದೇಶಿಕ ಸಮಿತಿಯ ನಿರ್ಮಾಣ ಮಾಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ಡಿಸೆಂಬರ್ ತಿಂಗಳಲ್ಲಿ ನಡೆಯುವ ತಾಲೂಕು ಯಾದವ ಸಮಾವೇಶದ ಪೂರ್ವಭಾವಿ ಕುರಿತು ಚರ್ಚಿಸಲಾಯಿತು. ಎಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಕೋಶಾಧಿಕಾರಿ ಜಯರಾಮ ವಂದಿಸಿದರು.