ವಾಹನ ಅಪಘಾತದಲ್ಲಿ ಮೃತಪಟ್ಟ ಮೋಕ್ಷಾಳಿಗೆ ದೇವಚಳ್ಳ ಶಾಲೆಯಲ್ಲಿ ಶ್ರದ್ಧಾಂಜಲಿ ಸಭೆ

0

ಅ.4ರಂದು ವಾಹನ ಅಪಘಾತದಲ್ಲಿ ಮೃತಪಟ್ಟ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ದಿ| ಕುಮಾರಿ ಮೋಕ್ಷಾಳಿಗೆ ಶ್ರದ್ಧಾಂಜಲಿ ಸಭೆ ಮತ್ತು ನುಡಿ ನಮನ ಇಂದು (ಅ.17) ದೇವಚಳ್ಳ ಶಾಲೆಯಲ್ಲಿ ನಡೆಯಿತು.

ಕು| ಮೋಕ್ಷ ಶಾಲೆಯಲ್ಲಿ ಪಠ್ಯ ಹಾಗೂ ಪಠ್ಯೇತರ ವಿಷಯಗಳಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದು ಶಾಲೆಯಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರಳಾಗಿದ್ದಳು. ಮೃತಳ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

 

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಜಯಪ್ರಕಾಶ್ ಕುಚ್ಚಾಲ, ಶಾಲ ಮುಖ್ಯಗುರುಗಳಾದ ಶ್ರೀಧರ ಗೌಡ ಕೆ, ಅಕ್ಷಯ ವೆಲ್ಡಿಂಗ್ ಸೆಂಟರ್ ಮಾಲಕ ಹೇಮನಾಥ ಕೋಡ್ತುಗುಳಿ, ಹಿಮಕರ ಬಾಜಿನಡ್ಕ, ಶಿಕ್ಷಕ ವೃಂದದವರು, ಎಸ್ ಡಿಎಂಸಿಯ ಎಲ್ಲಾ ಸದಸ್ಯರು, ಪೋಷಕ ವೃಂದದವರು ಅಕ್ಷರ ದಾಸೋಹ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here