ಅಡ್ಕಾರು: ಸಂಜೀವಿನಿ ಕಟ್ಟಡಕ್ಕೆ ಗುದ್ದಲಿಪೂಜೆ

0

 

ಜಾಲ್ಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟಕ್ಕೆ ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುದಾನದಲ್ಲಿ 17. 50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಅ.20ರಂದು ಗುದ್ದಲಿಪೂಜೆ ನಡೆಯಿತು.

ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಕದಿಕಡ್ಕ, ಗ್ರಾ.ಪಂ. ಪ್ರಭಾರ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ ನೆಕ್ರಾಜೆ, ತಾ.ಪಂ.ನ ಸಿಬ್ಬಂದಿಗಳಾದ ಮಹೇಶ್, ಶ್ವೇತ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಕಾಟೂರು, ಉಪಾಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ. ಸೌಮ್ಯ ಕದಿಕಡ್ಕ, ಎಲ್.ಸಿ.ಆರ್.ಪಿ. ಕು. ಚಂದ್ರಕಲಾ, ಶ್ರೀಮತಿ ಸವಿತ ಪೆರುಮುಂಡ, ಗ್ರಾ.ಪಂ. ಸದಸ್ಯರುಗಳಾದ ಎನ್.ಎಂ. ಸತೀಶ್ ಕೆಮನಬಳ್ಳಿ, ಪಿ.ಆರ್. ಸಂದೀಪ್ ಕದಿಕಡ್ಕ, ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಅಬ್ದುಲ್ ಮಜೀದ್ ನಡುವಡ್ಕ, ವಿಜಯ ಅಡ್ಕಾರು, ಶ್ರೀಮತಿ ಸಂಧ್ಯಾವಾಗ್ಲೆ, ಶ್ರೀಮತಿ ಗೀತಾ ಚಂದ್ರಹಾಸ ಅರ್ಭಡ್ಕ, ಶಿವಪ್ರಸಾದ್ ಕುಕ್ಕಂದೂರು, ಈಶ್ವರ ನಾಯ್ಕ ಕುಕ್ಕಂದೂರು, ಗ್ರಾ.ಪಂ. ಗ್ರಂಥಪಾಲಕಿ ಶ್ರೀಮತಿ ಸುಚಿತ್ರ ಕುಕ್ಕಂದೂರು, ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಸ್ವಚ್ಛಕಿರಣ ಸ್ವಚ್ಛತಾ ಗುಂಪಿನ ಪದಾಧಿಕಾರಿಗಳು, ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here