ಜಾನುವಾರುಗಳಲ್ಲಿ ಚರ್ಮಗಂಟು ರೋಗ ಹಿನ್ನೆಲೆ :  ದ.ಕ ಜಿಲ್ಲೆಯಲ್ಲಿ ಗೋಸಾಗಾಟ‌ ತಾತ್ಕಾಲಿಕ ನಿಷೇಧ: ಜಿಲ್ಲಾಧಿಕಾರಿ ಆದೇಶ

0

 

ರಾಜ್ಯದಾದ್ಯಂತ ಹೆಚ್ಚುತ್ತಿರುವ ಜಾನುವಾರುಗಳ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅ. 20ರಿಂದ ನ. 30ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯೊಳಗೆ ಮತ್ತು ಹೊರಜಿಲ್ಲೆ ಅಥವಾ ನೆರೆರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.
ಕ್ಯಾಪ್ರಿಪಾಕ್ಸ್‌ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಹೆಚ್ಚಾಗಿ ಕಂಡುಬರುವ ವೈರಸ್‌ ಕಾಯಿಲೆಯಾಗಿದೆ.


ಈ ಕಾಯಿಲೆ ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ.ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದಲ್ಲದೆ ಗ್ರಾ.ಪಂ. ವ್ಯಾಪ್ತಿಯಲ್ಲಿ ನೊಣ, ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಂಗಿಗ್‌ ಮಾಡುವಂತೆ ಸಂಬಂಧಿಸಿದವರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.