ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

0

 

 

ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರಯುಕ್ತ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ ಮಾನಸಿಕ ಒತ್ತಡವನ್ನು ಪರಿಹರಿಸುವ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆಯನ್ನು ಡಾ. ಅಶೋಕ್ ಕೆ., ಪ್ರೊಪೆಸರ್ ಹಾಗೂ ವಿಭಾಗ ಮುಖ್ಯಸ್ಥರು ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ, ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಸದಸ್ಯರು ಹಾಗೂ ಕೆ.ವಿ.ಜಿ ಮೆಡಿಕಲ್ ಕಾಲೇಜ್‌ನ ಎಕ್ಸಿಕ್ಯುಟೀವ್ ಡೈರೆಕ್ಟರ್ ಆದ Ar. ಅಕ್ಷಯ್ ಕೆ. ಸಿ., ಇವರು ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಬಗ್ಗೆ ಮಾತನ್ನಾಡಿ “ಆಯುರ್ ನ್ಯೂಸ್” ಕಾಲೇಜಿನ ತ್ರೈಮಾಸಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ., ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಮಹತ್ವವನ್ನು ವಿವರಿಸಿದರು. ವೇದಿಕೆಯಲ್ಲಿ Ar. ಅಕ್ಷಯ್ ಕೆ. ಸಿ., ಪ್ರೊ. ಡಾ. ಲೀಲಾಧರ್ ಡಿ. ವಿ., ಕೆ.ವಿ.ಜಿ ಆಯುರ್ವೇದ ಫಾರ್ಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊ. ಡಾ. ಪುರುಷೋತ್ತಮ ಕೆ. ಜಿ., ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಆಸ್ಪತ್ರೆಯ ವೈದ್ಯಾಧಿಕಾರಿಯಾದ ಪ್ರೊ. ಡಾ. ಸನತ್ ಕುಮಾರ್ ಡಿ. ಜಿ., ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಎನ್.ಎಸ್.ಎಸ್., ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರೊ. ಡಾ. ಪುರುಷೋತ್ತಮ ಕೆ. ಜಿ, ಇವರು ಎಲ್ಲರನ್ನು ಸ್ವಾಗತಿಸಿದರು. ಡಾ. ಸನತ್ ಕುಮಾರ್ ಡಿ. ಜಿ. ವಂದಿಸಿದರು. ಈ ಕಾರ್ಯಕ್ರಮವನ್ನು ಡಾ. ಫಾತಿಮಾತ್ ಪಾಯಿಮ ನಿರೂಪಿಸಿದರು.