ಕನ್ನಡ ಸಾಹಿತ್ಯ ಸಮ್ಮೇಳನ – 2 ನೇ ಪೂರ್ವಭಾವಿ ಸಭೆ

0

 

ಗೂನಡ್ಕದ ಸಜ್ಜನ ಪ್ರತಿಷ್ಠಾನದ ನೇತೃತ್ವದಲ್ಲಿ ನಡೆಯಲಿರುವ ಸುಳ್ಯ ತಾಲೂಕು ಸಾಹಿತ್ಯ ಸಮ್ಮೇಳನದ ‌2 ನೇ ಪೂರ್ವಭಾವಿ ಸಭೆ ಅ. 22 ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ ನಡೆಯಿತು.

 

ಸ್ವಾಗತ ಸಮಿತಿ ಅಧ್ಯಕ್ಷ  ಉಮ್ಮರ್ ಬೀಜದಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಸ್ವಾಗತ ಸಮಿತಿ ಕಾ ರ್ಯಾಧ್ಯಕ್ಷ ಜಿ.ಕೆ. ಹಮೀದ್ , ಗೌರವಾಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ , ಸಂತೋಷ್ ಕುತ್ತಮೊಟ್ಟೆ ಹಾಗೂ ಎಲ್ಲಾ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಿತಿಗಳ ಕೆಲಸ ಕಾರ್ಯಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಸ್ಟಿಕ್ಕರ್ ಬಿಡುಗಡೆ ಮಾಡಲಾಯಿತು. ಸಮ್ಮೇಳನದ ಪ್ರಯುಕ್ತ ಕೈಚೀಲವನ್ನು ಬಿಡುಗಡೆ ಮಾಡಲಾಯಿತು. ಸ್ವಾಗತ ಸಮಿತಿ ಅಧ್ಯಕ್ಷ ಉಮ್ಮರ್ ಬೀಜದಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here