ಸುಬ್ರಹ್ಮಣ್ಯ ಮಠಕ್ಕೆ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಭೇಟಿ

0

ಸಂಪುಟ ಶ್ರೀ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠಕ್ಕೆ ಚಿತ್ರದುರ್ಗದ ಶಿವಚರಣ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಅವರು ಅ.24 ರಂದು ಭೇಟಿ ನೀಡಿದರು.
ಮಠಾಧಿಪತಿ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು. ಶ್ರೀಗಳು ಮಾದಾರ ಚೆನ್ನಯ್ಯ ಶ್ರೀಗಳನ್ನು ಗೌರವಿಸಿದರು.


ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನಾ ಸೀತಾರಾಮ್, ದ.ಕ.ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ವೆಂಕಟ್ ವಳಲಂಬೆ, ಪುತ್ತೂರು ಜೇನು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರು, ಕಜಂಪಾಡಿ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.