ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

0

 

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮವು ಅ. 28 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್‌ಸ್‌ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾ0ಶುಪಾಲರು ಡಾ. ಸುರೇಶ ., ಉಪಪ್ರಾ0ಶುಪಾಲರು ಡಾ. ಶ್ರೀಧರ್ ಕೆ., ಎಲೆಕ್ಟ್ರಾನಿಕ್‌ಸ್‌ ಕಮ್ಯುನಿಕೇಶನ್ ಇಂಜಿನಿಯರಿಂಗ್ ಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗದ ಹಾಗೂ ಕಾಲೇಜಿನ ಸಾಂಸ್ಕೃತಿಕ ಕಮಿಟಿಯ ಸಂಯೋಜಕರದ ಪ್ರೊ. ಕೃಷ್ಣರಾಜ್ ಎಂ. ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ, ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿ ಆಯ್ದ ಕನ್ನಡ ಹಾಡುಗಳನ್ನು ಹಾಡಿದರು.