ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮ

0

 

ಸುಳ್ಯ ರೋಟರಿ ಶಾಲೆಯಲ್ಲಿ ಪೂರ್ವಸಿದ್ಧತಾ ಸಭೆ – ಸಚಿವ ಎಸ್.ಅಂಗಾರ ಭಾಗಿ

ಮೂಡಬಿದಿರೆಯ ವಿದ್ಯಾನಗರಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಕಾರ್ಯಕ್ರಮವು ಡಿ.21 ರಿಂದ ಡಿ.27 ರವರೆಗೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ,
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸುಳ್ಯ ಮತ್ತು ಪಂಜ ಸ್ಥಳೀಯ ಸಂಸ್ಥೆಗಳ ವತಿಯಿಂದ ಸುಳ್ಯದ ರೋಟರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೂರ್ವಸಿದ್ಧತಾ ಸಭೆಯು ಅ.31 ರಂದು ನಡೆಯಿತು.
ಸಭೆಯಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ರವರು ಭಾಗವಹಿಸಿದರು.


ಕಾರ್ಯಕ್ರಮದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ.ಮೋಹನ್ ಆಳ್ವ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ ಎಸ್.ಪಿ, ತಾಲೂಕು ಆರೋಗ್ಯಾಧಿಕಾರಿ ಡಾ.ನಂದ ಕುಮಾರ್, ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಉಪಾಧ್ಯಕ್ಷರಾದ ವಿಮಲಾ ರಂಗಯ್ಯ, ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.