ಸುಳ್ಯ ಹೋಬಳಿ ಮಟ್ಟದ ಕ್ರೀಡಾಕೂಟ

0

 

ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ – ತಾಲೂಕು ಮಟ್ಟಕ್ಕೆ ಆಯ್ಕೆ

ಸುಳ್ಯ ಹೋಬಳಿ ಮಟ್ಟದ ಕ್ರೀಡಾಕೂಟವು ಸರಕಾರಿ ಪದವಿ ಪೂರ್ವ ಜೂನಿಯರ್ ಕಾಲೇಜು ಮೈದಾನದಲ್ಲಿ ಅ.29ರಂದು ನಡೆಯಿತು.
ಈ ಕ್ರೀಡಾಕೂಟದಲ್ಲಿ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಸುಮಾರು 50 ವಿದ್ಯಾರ್ಥಿಗಳು
ಭಾಗವಹಿಸಿದ್ದು. ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಪ್ರಾಥಮಿಕ ವಿಭಾಗದಿಂದ ಪ್ರಣಿತ್ (7ನೇ ತರಗತಿ) ಭಾಗವಹಿಸಿದ್ದು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ,ಗುಂಡಡೆಸೆತದಲ್ಲಿ ದ್ವಿತೀಯ ಸ್ಥಾನ ,ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ , ಅನ್ವಿಶ್
(6 ತರಗತಿ) ಭಾಗವಹಿಸಿ, 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಪಡೆದಿರುತ್ತಾರೆ.


ಎಂಟನೇ ತರಗತಿ ವಿಭಾಗದಲ್ಲಿ ಸ್ವಸ್ತಿಕ್ ಭಾಗವಹಿಸಿ ಗುಂಡೆಸೆತದಲ್ಲಿ ಪ್ರಥಮ ,ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು, ವೈಯಕ್ತಿಕ ಚಾಂಪಿಯನ್ ಶಿಪ್ ಅನ್ನು ತನ್ನದಾಗಿಸಿಕೊಂಡಿದ್ದಾರೆ.
ಸಮೀಕ್ಷ (8ನೇ ತರಗತಿ) ಭಾಗವಹಿಸಿ 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಯಜ್ಞ (ಎಂಟನೇ ತರಗತಿ) ಚಕ್ರ ಎಸೆತದಲ್ಲಿದ್ವಿತೀಯ ಸ್ಥಾನ, ಪಡೆದಿರುತ್ತಾರೆ.

 

ಪ್ರೌಢಶಾಲಾ ವಿಭಾಗದಲ್ಲಿ ಶ್ರೀಪ್ರಸಾದ್ (10ನೇ ತರಗತಿ) ವೇಗದ ನಡಿಗೆಯಲ್ಲಿ ಪ್ರಥಮ ಸ್ಥಾನ, ಶರ್ಮಿತ್ (ಹತ್ತನೇ ತರಗತಿ) ವೇಗದ ನಡಿಗೆಯಲ್ಲಿ ದ್ವಿತೀಯ ಸ್ಥಾನ, 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ದರ್ಶನ್ ಹತ್ತನೇ ತರಗತಿ 800 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಪ್ರಿಯಾಂಕಾ (9ನೇ ತರಗತಿ) ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ, ತ್ರಿವಿತ ಜಿಗಿತದಲ್ಲಿ ತೃತೀಯ ಸ್ಥಾನ, ಎಂಟನೇ ತರಗತಿ ವಿಭಾಗದಲ್ಲಿ ಘನಶ್ಯಾಮ್. ಎಸ್. ಪಿ, 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.