ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 67 ನೇ ಕನ್ನಡ ರಾಜ್ಯೋತ್ಸವ

0

 

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ, 67ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಸಂಭ್ರಮವನ್ನು ಆಚರಿಸಲಾಯಿತು.

ಸಭಾಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ರೆ|ಫಾ|ವಿಕ್ಟರ್ ಡಿ,ಸೋಜ ರವರು ವಹಿಸಿದ್ದರು.ಶಾಲಾ ಮುಖ್ಯೋಪಾದ್ಯಾಯಿನಿ ಸಿ|ಬಿನೋಮ,ಮುಖ್ಯ ಅತಿಥಿಗಳಾಗಿ ಸುಳ್ಯದ ಗಾಂಧೀನಗರ ಕಾಲೇಜಿನ ಉಪನ್ಯಾಸಕ ರಾಜೇಶ್ ಟಿ. ಉಪಸ್ಥಿತರಿದ್ದರು.

 

ಅತಿಥಿಗಳಾಗಿ ಪ್ರೌಢಶಾಲಾ ಪೋಷಕ ಸಮಿತಿ ಅಧ್ಯಕ್ಷ ಹರೀಶ್ ರಾವ್,ಪ್ರಾಥಮಿಕ ಶಾಲಾ ಪೋಷಕ ಅಧ್ಯಕ್ಷ ದುರ್ಗಾಪ್ರಸಾದ್ ,ಪೂರ್ವ ಪ್ರಾಥಮಿಕ ಶಾಲಾ ಪೋಷಕಾಧ್ಯಕ್ಷ ಡಾ. ಅನುರಾಧಾ ಕುರುಂಜಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭಹಾರೈಸಿದರು.


ವಿದ್ಯಾರ್ಥಿಗಳು ಪ್ರಾರ್ಥನೆ ನೆರವೇರಿಸಿ,ಶಿಕ್ಷಕಿ ಪುಷ್ಪಲತಾ ಸ್ವಾಗತಿಸಿದರು.ನಂತರ ಧ್ವಜಾರೋಹಣ ಗೈದು, ರಾಜೇಶ್ ಟಿ ಅವರು ದಿನದ ಮಹತ್ವದ ಬಗ್ಗೆ ಸಂದೇಶ ನೀಡಿದರು.ವಿದ್ಯಾರ್ಥಿಗಳಾದ ಪುಷ್ಪಕ್ ಮತ್ತು ಮನಸ್ವಿ ಅವರು ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿದರು. ಬಳಿಕ ಪ್ರೌಢ ಶಾಲಾ ವಿದ್ಯಾರ್ಥಿನಿಯರು ಸಮೂಹ ಗೀತೆ ಹಾಡಿದರು. ಪ್ರೌಢ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಸಮೂಹ ನೃತ್ಯ ಮಾಡಿದರು.ಸಂಚಾಲಕರು ಸಭಾಧ್ಯಕ್ಷತೆ ನೆಲೆಯಲ್ಲಿ ಮಾತನಾಡಿದರು.ಶಿಕ್ಷಕಿ ಜೂಲಿಯೆಟ್ ಲೋಬೋ ವಂದಿಸಿದರು.ಶಿಕ್ಷಕಿ ವಿದ್ಯಾಸರಸ್ವತಿ ಕಾರ್ಯಕ್ರಮ ನಿರೂಪಿಸಿ , ಶಿಕ್ಷಕಿ ದೇವಿಲತಾ ಕಾರ್ಯಕ್ರಮ ನಿರ್ವಹಣೆಯ ಜವಾಬ್ದಾರಿ ನಿರ್ವಹಿಸಿದ್ದರು.