ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ

0

 

ಕನ್ನಡದಲ್ಲಿ ಕಲಿತರೆ ಹಿನ್ನಡೆಯಿಲ್ಲ : ಡಾ. ದಾಮ್ಲೆ

“ಕನ್ನಡವನ್ನು ಉಳಿಸಿ ಬೆಳೆಸುವುದರೊಂದಿಗೆ ಬಲಿಷ್ಠಗೊಳಿಸಬೇಕು. ಕನ್ನಡವನ್ನು ಸ್ಪಷ್ಟ, ಸಹಜ ಹಾಗೂ ಸರಾಗವಾಗಿ ಓದಲು ಕಲಿತುಕೊಳ್ಳಬೇಕು. ಪಠ್ಯಕ್ಕೆ ಮಿಗಿಲಾಗಿ ಹೆಚ್ಚಿನ ಕೃತಿಗಳನ್ನು ಓದುವ ಅಭ್ಯಾಸ ಮಾಡಿಕೊಳ್ಳಬೇಕು. ಓದುವಿಕೆ ವಿಸ್ತಾರವಾದಾಗ ಕನ್ನಡ ಭಾಷೆ ಉಳಿಯುತ್ತದೆ. ಜಡತ್ವದಿಂದ ಹೊರಬಂದು ಕನ್ನಡ ಕಲಿಯುವಿಕೆಯಲ್ಲಿ ತೊಡಗಿಸಿಕೊಂಡರೆ ಎಂದಿಗೂ ಹಿನ್ನಡೆಯಿಲ್ಲ” ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿರುವ ಡಾ. ಚಂದ್ರಶೇಖರ ದಾಮ್ಲೆ ಅವರು ಹೇಳಿದರು.

ಇವರು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಮಾತನಾಡಿ ” ಕರ್ನಾಟಕದಲ್ಲಿ ಕನ್ನಡಿಗರಿಗೆ ಸ್ಥಾನಮಾನವಿಲ್ಲದಾಗಿದೆ. ಕನ್ನಡವನ್ನು ಉಳಿಸುವಂತಹ ನಿಟ್ಟಿನಲ್ಲಿ ನಾವು ಮಾಡಬೇಕಾದ ಪ್ರಯತ್ನ ಕರ್ತವ್ಯವಾಗಿರಬೇಕು” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕಿ ಶ್ರೀಮತಿ ವಿಜೇತ ಪಿ ಮಾತನಾಡಿ ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಕನ್ನಡ ಕವಿಗಳು, ಕರ್ನಾಟಕ ಏಕೀಕರಣದ ಹೋರಾಟಗಾರರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಇನ್ನೋರ್ವ ಶಿಕ್ಷಕಿ ಕು. ಚೈತ್ರಶ್ರೀ ಕನ್ನಡ ಸಾಹಿತ್ಯ ಬೆಳೆದು ಬಂದ ಹಾದಿಯನ್ನು ವಿವರಿಸುತ್ತಾ “ಕೀಳರಿಮೆ ಬಿಟ್ಟು ಕನ್ನಡ ಭಾಷೆಯಲ್ಲಿ ಹೆಮ್ಮೆಯಿಂದ ವ್ಯವಹರಿಸಬೇಕು” ಎಂದು ಹೇಳಿದರು.
ಹತ್ತನೇ ತರಗತಿ ವಿದ್ಯಾರ್ಥಿ ಧೃತಿಕ್ ಪಿ. ಸಿ ಕನ್ನಡ ನಾಡ ನುಡಿಯ ಬಗ್ಗೆ ಮಾತನಾಡಿದರು.
ಬಳಿಕ 5 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕನ್ನಡ ಗೀತ ಗಾಯನ ಕಾರ್ಯಕ್ರಮ ಕನ್ನಡ ರಸಪ್ರಶ್ನೆ ಸ್ಪರ್ಧೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕ ದೇವಿಪ್ರಸಾದ ಜಿ. ಸಿ ಸ್ವಾಗತಿಸಿ ಶಿಕ್ಷಕಿ ಅಮೃತ ಭಟ್ ವಂದಿಸಿದರು.
ಶಿಕ್ಷಕಿ ಶ್ರೀಮತಿ ಸವಿತಾ ಎಂ ಇವರು ವಂದಿಸಿದರು.