ಗಾಂಧಿನಗರ : ಭ್ರಷ್ಟಾಚಾರ ಜಾಗೃತಿ ಅರಿವು ಸಪ್ತಾಹ

0

ಭ್ರಷ್ಟಾಚಾರ ವಿರೋಧಿ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಕಾನೂನು ಪ್ರಾಧಿಕಾರದ ವತಿಯಿಂದ ನವಂಬರ್ 1 ರಿಂದ 13 ರವರೆಗೆ ಭ್ರಷ್ಟಾಚಾರ ಜಾಗೃತಿ ಹರಿವು ಸಪ್ತಾಹದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಇದರ ಅಂಗವಾಗಿ ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ಭ್ರಷ್ಟಾಚಾರ ಜಾಗೃತಿ ಅರಿವು ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಆಚರಿಸಲಾಗುತ್ತಿದ್ದು, ಎರಡನೆಯ ದಿನದ ಕಾರ್ಯಕ್ರಮವಾಗಿ ಇಂದು ಸುಳ್ಯ ಗಾಂಧಿನಗರ ಕೆಪಿಎಸ್ ಕಾಲೇಜ್ ವಿಭಾಗದ ಸಭಾಂಗಣದಲ್ಲಿ ಭ್ರಷ್ಟಾಚಾರ ಜಾಗೃತಿ ಅಭಿಯಾನ ಮತ್ತು ಪ್ರತಿಜ್ಞಾವಿಧಿ ಬೋಧನೆ ಕಾರ್ಯಕ್ರಮ ನಡೆಯಿತು.


ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ತಾಲೂಕು ಆಡಳಿತ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ, ಸುದ್ದಿ ಸಮೂಹ ಮಾಧ್ಯಮ, ಕೆಪಿಎಸ್ ಶಾಲೆ ಗಾಂಧಿನಗರ ಇವರ ಸಂಯುಕ್ತಾಶ್ರಯದಲ್ಲಿ ನಡೆಸಲಾಯಿತು.
ಸುಳ್ಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶೆ, ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ ಕು.ಅರ್ಪಿತಾ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಶಾಲಾ ಪ್ರಾಂಶುಪಾಲ ಅಬ್ದುಲ್ ಸಮಾದ್ ಎನ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಹಿರಿಯ ನ್ಯಾಯವಾದಿ ಜಗದೀಶ್ ಹುದೇರಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಭ್ರಷ್ಟಾಚಾರ ಜಾಗೃತಿ ಕುರಿತು ಮಾಹಿತಿಯನ್ನು ನೀಡಿ ಭ್ರಷ್ಟಾಚಾರ ಉಂಟಾಗಲು ಕಾರಣ, ಅದರಿಂದ ಆಗುವ ತೊಂದರೆಗಳು, ಮತ್ತು ಕಾನೂನಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡವರಿಗೆ ಇರುವ ಶಿಕ್ಷೆಗಳ ಕುರಿತು, ಮತ್ತು ಅದರ ನಿರ್ಮೂಲನೆಯ ಅಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಕೆ ನಾರಾಯಣ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹದೇವ ಭ್ರಷ್ಟಾಚಾರ ಜಾಗೃತಿ ಕುರಿತು ಮಾತನಾಡಿದರು.


ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಅರೋನ್ ಡಿಸೋಜ, ಪ್ಯಾನಲ್ ವಕೀಲರುಗಳಾದ ನಾರಾಯಣ ಎಂ ಜಟ್ಟಿಪಳ್ಳ, ಪ್ರತಿಭಾ ಜ್ಯೋತಿ ಪಿ ವಿ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ರೀಮತಿ ಶೈಲಜಾ, ಗಾಂಧಿನಗರ ಕೆಪಿಎಸ್ ಶಾಲಾ ಸಮಿತಿ ಕಾರ್ಯಾಧ್ಯಕ್ಷ ಪ್ರವೀಣ್ ನ್ಯಾಕ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ನ್ಯಾಯಾಧೀಶೆ ಕು. ಅರ್ಪಿತಾ ವಿದ್ಯಾರ್ಥಿಗಳಿಗೆ ಮತ್ತು ಸಭೆಯಲ್ಲಿ ಭಾಗವಹಿಸಿದ್ದ, ಉಪನ್ಯಾಸಕರಿಗೆ, ಹಾಗೂ ಇತರ ಗಣ್ಯರಿಗೆ ಭ್ರಷ್ಟಾಚಾರ ನಿರ್ಮೂಲನೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಸುಳ್ಯ ನ್ಯಾಯಾಲಯದ ಸಿಬ್ಬಂದಿಗಳು, ವಕೀಲರ ಸಂಘದ ಪದಾಧಿಕಾರಿಗಳು ಸದಸ್ಯರು, ಶಾಲಾ ಶಿಕ್ಷಕ ವೃಂದದವರು,ವಿದ್ಯಾರ್ಥಿಗಳು ಕಾನೂನು ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಪ್ರಾಂಶುಪಾಲ ಅಬ್ದುಲ್ ಸಮದ್ ಸ್ವಾಗತಿಸಿ, ನ್ಯಾಯಾಲಯದ ಪ್ಯಾನಲ್ ವಕೀಲೆ ಪ್ರತಿಭಾ ಜ್ಯೋತಿ ಪಿ ವಿ ವಂದಿಸಿದರು.ಕಾಲೇಜು ಉಪನ್ಯಾಸಕ ರಾಜೇಶ್ ಕಾರ್ಯಕ್ರಮ ನಿರೂಪಿಸಿದರು.