ಬಾಲ್ ಬ್ಯಾಡ್ಮಿಂಟನ್ ನಲ್ಲಿ ಶಾರದಾ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ

0

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲ್ಪಟ್ಟ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮೀಂಟನ್ ಪಂದ್ಯಾಟದಲ್ಲಿ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡವು ಮೂಡಬಿದಿರೆ ಅಳ್ವಾಸ್ ತಂಡದೆದುರು ಸೆಣೆಸಿ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ. 

ಬೀರಮಂಗಿಲದ ಕಜೆ. ದಿ.ಬಾಲಚಂದ್ರ ಹಾಗೂ ಯಮುನಾ ದಂಪತಿಗಳ ಪುತ್ರಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತುಳಸಿ.ಕೆ.ಬಿ. ಮತ್ತು ಐವರ್ನಾಡಿನ ಕುತ್ಯಾಡಿ ಶ್ರೀಧರ ಮತ್ತು ಪಾರ್ವತಿ ದಂಪತಿಗಳ ಪುತ್ರಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ಶ್ರೀಪಾ ಕೆ., ಚಿಕ್ಕಬಳ್ಳಾಪುರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಬ್ಯಾಡ್ ಮಿಂಟನ್ ಪಂದ್ಯಾಟದಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.