ಪೆರಾಜೆ ಜ್ಯೋತಿ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

0

ಪೆರಾಜೆ ಗ್ರಾಮದ ಜ್ಯೋತಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ನ.1 ರಂದು ಆಚರಿಸಲಾಯಿತು.


ಜ್ಯೋತಿ ವಿದ್ಯಾ ಸಂಘದ ಸಹ ಕಾರ್ಯದರ್ಶಿ ಲೋಕನಾಥ ಅಮೆಚೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕನ್ನಡ ಸಾಹಿತ್ಯ, ಭಾಷೆ, ಪರಂಪರೆ ಹಾಗೂ ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಬಗ್ಗೆ ಅಭಿರುಚಿ ಹಾಗೂ ಹವ್ಯಾಸ ಬೆಳೆಸಬೇಕೆಂಬ ಬಗ್ಗೆ ವಿದ್ಯಾರ್ಥಿಗಳಿಗೆ ಮನದಟ್ಟಾಗುವಂತೆ ಮಾತನಾಡಿದರು.
ವಿದ್ಯಾರ್ಥಿಗಳಿಂದ ಕನ್ನಡ ಗೀತೆಗಳ ಗಾಯನ ನಡೆಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಾಲಾ ಮುಖ್ಯೋಪಾಧ್ಯಾಯರಾದ ನರೇಂದ್ರ ಎಂ.ಆರ್. ಸ್ವಾಗತಿಸಿ, ಸಹ ಶಿಕ್ಷಕ ನಾಗರಾಜ್ ಜಿ.ಆರ್. ವಂದಿಸಿದರು. ಶಿಕ್ಷಕಿ ಶ್ರೀಮತಿ ಚಂದ್ರಮತಿ ಕುಂಬಳಚೇರಿ ಕಾರ್ಯಕ್ರಮ ನಿರೂಪಿಸಿದರು.