ಯೇನೆಕಲ್ಲು ಸಹಕಾರಿ ಸಂಘದಲ್ಲಿ ಕೆಂಪೇಗೌಡ ರಥಕ್ಕೆ ಅದ್ದೂರಿ ಸ್ವಾಗತ

0

 

 

ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅನಾವರಣಗೊಳ್ಳಲಿರುವ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯ ಅನಾವರಣ ಪ್ರಯುಕ್ತ ಪವಿತ್ರ ಮೃತಿಕ ಸಂಗ್ರಹಣ ರಥವನ್ನು ಯೇನೆಕಲ್ಲು ಮತ್ತು ಬಳ್ಪ ಗ್ರಾಮಸ್ಥರ ಪರವಾಗಿ ಅ. 31ರಂದು ಯೇನೆಕಲ್ಲಿನಲ್ಲಿ ಸ್ವಾಗತಿಸಲಾಯಿತು.

ಯೇನೆಕಲ್ಲು ಸಹಕಾರಿ ಸಂಘದ ಅಧ್ಯಕ್ಷರಾದ ಭವಾನಿ ಶಂಕರ ಪೋಂಬಾಡಿ ರಥಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಪವಿತ್ರ ಮೃತ್ಯುಕೆಯನ್ನು ಹಸ್ತಾಂತರಿಸಿದರು. ಯೇನೆಕಲ್ಲು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಭರತ್ ನೆಕ್ರಾಜೆ, ಯೇನೆಕಲ್ಲು ಶಂಕಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಮತ್ತು ಬಚ್ಚನಾಯಕ ದೇವಸ್ಥಾನದ ಅಧ್ಯಕ್ಷ ನಾಗೇಶ್ ನಕ್ರಾಜೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಚುನಾಯಿತ ಪ್ರತಿನಿಧಿಗಳು, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಕಾರ್ಯದರ್ಶಿ ಮೋನಪ್ಪ ಡಿ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕಲ್ಕುದಿ, ಸಂಘದ ಸಿಬ್ಬಂದಿ ವರ್ಗ, ಬಳ್ಪ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಶಶಿಕಲಾ‌ ಸೂಂತಾರು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರು, ಯೇನೆಕಲ್ಲು ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾಧ್ಯಾಪಕರು ಮತ್ತು ಊರಿನ ಮಹನೀಯರು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶೇಖರ್ ಯು.ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.