ಪಂಜ : ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

0

ನ.18-19 ರಂದು ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ತಾಲೂಕು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಪಂಜ ಇವರ ಸಹಯೋಗದಲ್ಲಿ ನಡೆಯುವ ಮೈಸೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ-2022 ನ.18 ಮತ್ತು ನ.19 ರಂದು ಪಂಜ ಸರಕಾರಿ ಪದವಿ ಪೂರ್ವ ಕಾಲೇಜ್ ನ ಕೋಟಿ ಚೆನ್ನಯ ಕ್ರೀಡಾಂಗಣದಲ್ಲಿ ನಡೆಯಲಿದೆ.ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನ. 3 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಿ ಶುಭ ಹಾರೈಸಿದರು. ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ ಕಾರ್ಯಕಾರಿ ಸಮಿತಿ ಅಧ್ಯಕ್ಷ ಮಾಧವ ಬಿ.ಕೆ.ಸಭಾಧ್ಯಕ್ಷತೆ ವಹಿಸಿ ಪಂದ್ಯಾಟಧ ಪೂರ್ವ ತಯಾರಿ ಕುರಿತು ಸಂಪೂರ್ಣ ಸಭೆಗೆ ವಿವರಿಸಿದರು.


ಮಂಗಳೂರು ಉತ್ತರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭರತ್,
ಪ್ರಾಂಶುಪಾಲ ವೆಂಕಪ್ಪ ಕೇನಾಜೆ, ಮುಖ್ಯ ಶಿಕ್ಷಕ ಟೈಟಸ್ ವರ್ಗೀಸ್, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಚಲಪತಿ, ಗ್ರಾಮ ಪಂಚಾಯತ್ ಸದಸ್ಯ ನಾರಾಯಣ ಕೃಷ್ಣನಗರ, ಕೋಟಿ ಚೆನ್ನಯ ಕ್ರೀಡಾಭಿವೃದ್ದಿ ಸಮಿತಿ ಅಧ್ಯಕ್ಷ ಚೀನಪ್ಪ ಕಾಣಿಕೆ, ಕೋಟಿ ಚೆನ್ನಯ ಕ್ರೀಡಾಭಿವೃದ್ದಿ ಸಮಿತಿ ಕೋಶಾಧಿಕಾರಿ ಡಾ.ಪ್ರಕಾಶ್ ಡಿ’ಸೋಜ, ಕಬಡ್ಡಿ ಪಂದ್ಯಾಟದ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷ ಕಾರ್ಯಪ್ಪ ಗೌಡ ಚಿದ್ಗಲ್ಲು, ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಶಿಕ್ಷಕ ಯೋಗೀಶ್ ಚಿದ್ಗಲ್ಲು ಸ್ವಾಗತಿಸಿದರು. ಶಿಕ್ಷಕ ಪುರಂದರ ಪನ್ಯಾಡಿ ನಿರೂಪಿಸಿದರು. ಶಿಕ್ಷಕಿ ಲತಾಶ್ರೀ ವಂದಿಸಿದರು.