ಐವರ್ನಾಡಿನಲ್ಲಿ ಯು.ಡಿ.ಶೇಖರ್ ಪಾರ್ಥೀವ ಶರೀರದ ಅಂತಿಮ ದರ್ಶನ

0

 

 

 

ನೂರಾರು ಜನರಿಂದ ಅಂತಿಮ ನಮನ

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಆಗಿದ್ದ ಅರಂತೋಡು ಗ್ರಾಮದ ಉಳುವಾರು ಯು.ಡಿ.ಶೇಖರ್ ರವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು ಅವರ ಪಾರ್ಥೀವ ಶರೀರವನ್ನು ಐವರ್ನಾಡು ಗ್ರಾಮ ಪಂಚಾಯತ್ ಆವರಣಕ್ಜೆ ತರಲಾಗಿದ್ದು ಅಲ್ಲಿ ನೂರಾರು ಜನರು ಅಂತಿಮ ದರ್ಶನ ಪಡೆದರು.
ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಹಲವು ವರ್ಷಗಳ ಕಾಲ ಇವರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಇವರು ಸೇವೆ ಸಲ್ಲಿಸಿದ್ದರು.
ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು,ಗ್ರಾಮ ಪಂಚಾಯತ್ ಸದಸ್ಯರು,ಪಿ.ಡಿ.ಒ ಶ್ಯಾಮ್ ಪ್ರಸಾದ್, ಸಿಬ್ಬಂದಿ ವರ್ಗದವರು, ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಸಂಘದ ನಿರ್ದೇಶಕರು,ಸಿಬ್ಬಂದಿ ವರ್ಗದವರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ನೂರಾರು ಜನ ಗ್ರಾಮಸ್ಥರು ಅಂತಿಮ ನಮನ ಸಲ್ಲಿಸಿದರು.